ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಅದೃಷ್ಟ ತರಲಿ: ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಳಕಿನ ಹಬ್ಬ ದೀಪಾವಳಿ ಭಾರತದಲ್ಲಿ ಅತ್ಯಂತ ಜನಪ್ರಿಯ ಹಬ್ಬವಾಗಿದೆ. ದೀಪಾವಳಿಯನ್ನು ಇಂದು (ಅಕ್ಟೋಬರ್ 31) ದೇಶಾದ್ಯಂತ ಆಚರಿಸಲಾಗುತ್ತಿದೆ. ದೀಪಾವಳಿಯ ಸಮಯದಲ್ಲಿ ಹಿಂದೂಗಳು ಆರೋಗ್ಯ, ಸಮೃದ್ಧಿ, ಸಂಪತ್ತು ಮತ್ತು ಸಂತೋಷಕ್ಕಾಗಿ ಲಕ್ಷ್ಮಿ ದೇವತೆ ಮತ್ತು ಗಣೇಶನನ್ನು ಪೂಜಿಸುತ್ತಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂಭ್ರಮ ದೇಶದಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಆರೋಗ್ಯ ಮತ್ತು ಅದೃಷ್ಟವನ್ನು ತರಲಿ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮನಗಳನ್ನು ಸಲ್ಲಿಸಿದ್ದಾರೆ.

ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವುದು ಅವರ ಜೀವನದ ಪ್ರಮುಖ ಆದ್ಯತೆಯಾಗಿತ್ತು. ಅವರ ವ್ಯಕ್ತಿತ್ವ ಮತ್ತು ಕೆಲಸವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ಕೋರಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಭಾರತದಲ್ಲಿ ಅತ್ಯಂತ ಜನಪ್ರಿಯ ಹಬ್ಬವಾಗಿದೆ. ದೀಪಾವಳಿಯನ್ನು ಇಂದು (ಅಕ್ಟೋಬರ್ 31) ದೇಶಾದ್ಯಂತ ಆಚರಿಸಲಾಗುತ್ತಿದೆ. ದೀಪಾವಳಿಯ ಸಮಯದಲ್ಲಿ ಹಿಂದೂಗಳು ಆರೋಗ್ಯ, ಸಮೃದ್ಧಿ, ಸಂಪತ್ತು ಮತ್ತು ಸಂತೋಷಕ್ಕಾಗಿ ಲಕ್ಷ್ಮಿ ದೇವತೆ ಮತ್ತು ಗಣೇಶನನ್ನು ಪೂಜಿಸುತ್ತಾರೆ. ಈ ದಿನ ಕಾಳಿ ದೇವಿ ಮತ್ತು ಕುಬೇರನನ್ನೂ ಪೂಜಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com