ಪಾಟ್ನಾ: ಬಿಹಾರದ ಬೇಗುಸರಾಯ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸಚಿವರ ‘ಜನತಾ ದರ್ಬಾರ್(ಸಾರ್ವಜನಿಕ ಕುಂದುಕೊರತೆ ನಿವಾರಣಾ ಕಾರ್ಯಕ್ರಮ)ಕ್ಕೆ ಮನವಿಯೊಂದಿಗೆ ಬಂದಿದ್ದ ಆರೋಪಿ ಹಲ್ಲೆಗೆ ಯತ್ನಿಸಿದ್ದು, ಘಟನೆಯ ನಂತರ ಸಿಂಗ್ ಬೆಂಬಲಿಗರು ಥಳಿಸಿದ್ದಾರೆ. ಸೈಫಿ ಎಂದು ಗುರುತಿಸಲಾದ ವ್ಯಕ್ತಿ ಅವರ ಅರ್ಜಿಯನ್ನು ಪರಿಶೀಲಿಸುವಂತೆ ಕೇಳಿಕೊಂಡರು. ಕಾರ್ಯಕ್ರಮ ಮುಗಿದಿದೆ ಎಂದು ಹೇಳಿದಾಗ ವ್ಯಕ್ತಿ ತನ್ನ ವಿರುದ್ಧ ಘೋಷಣೆಗಳನ್ನು ಕೂಗಿದ ಎಂದು ಸಿಂಗ್ ಹೇಳಿದ್ದಾರೆ.
ಗಡ್ಡಧಾರಿಯು ಮೌಲ್ವಿಯಂತೆ ವೇಷಭೂಷಣದೊಂದಿಗೆ ನನ್ನ ಬಳಿಗೆ ಬಂದು ಮನವಿ ಸ್ವೀಕರಿಸಲು ನನ್ನನ್ನು ಕೇಳಿದರು, ನಾನು ಅವರಿಗೆ ‘ಜಂತಾ ದರ್ಬಾರ್’ ಮುಗಿದಿದೆ. ಸರಿಯಾದ ಸಮಯಕ್ಕೆ ಬರಬೇಕು ಎಂದು ಹೇಳಿದಾಗ ಅವರು ನನ್ನ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಒಂದು ಹಂತದಲ್ಲಿ ಅವರು ನನ್ನ ವಿರುದ್ಧ ದೈಹಿಕವಾಗಿ ದಾಳಿ ಮಾಡುವಂತೆ ವರ್ತಿಸಿದರು. ಅಲ್ಲಿ ನೆರೆದಿದ್ದ ಜನರು ಅವರನ್ನು ಹಿಮ್ಮೆಟ್ಟಿಸಿದ್ದು, ನಂತರ ಅವರನ್ನು ಪೊಲೀಸರಿಗೆ ಒಪ್ಪಿಸಲಾಯಿತು ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಬೇಗುಸರೈ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಮನೀಶ್ ಮಾತನಾಡಿ, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ಪೊಲೀಸ್ ವಶದಲ್ಲಿದ್ದಾನೆ. ಶನಿವಾರ ಮಧ್ಯಾಹ್ನ ಬಲ್ಲಿಯಾ ಉಪವಿಭಾಗದಲ್ಲಿ ಕೇಂದ್ರ ಸಚಿವರ ಕಾರ್ಯಕ್ರಮವಿತ್ತು. ಆತ ಸಿಂಗ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಮಧ್ಯೆ, ಆತ ಸಚಿವರಿಗೆ ಕಪಾಳಮೋಕ್ಷ ಮಾಡಲು ಪ್ರಯತ್ನಿಸಿದ ಆದರೆ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದರು ಎಂದುತಿಳಿಸಿದ್ದಾರೆ.
Advertisement