
ಹೌರಾ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ವರದಿಯಾಗಿದ್ದು, 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಲ್ಯಾಬ್ ಟೆಕ್ನಿಷಿಯನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಗಾಳದ ಹೌರಾ ಜಿಲ್ಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ಪ್ರಯೋಗಾಲಯದ ತಂತ್ರಜ್ಞನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೃತ್ಯ ನಡೆದಿದ್ದು, ಕಳೆದ ವಾರ ಚಿಕಿತ್ಸೆಗೆ ದಾಖಲಾಗಿದ್ದ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಿರುಕುಳಕ್ಕೊಳಗಾದ ಬಾಲಕಿ ಭಯಭೀತಗೊಂಡು ಪೋಷಕರಿಗೆ ಹೇಳುತ್ತಿರುವ ವಿಡಿಯೋ ವೈರಲ್ ಆಗಿದೆ.
‘ಪ್ರಯೋಗಾಲಯದಿಂದ ಬಾಲಕಿ ಅಳುತ್ತಾ ಹೊರಬಂದಳು. ಟೆಕ್ನಿಷಿಯನ್ ದೇಹವನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದು, ಹೊರಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಬೆದರಿಕೆ ಒಡ್ಡಿದ್ದ ಎಂದು ಬಾಲಕಿ ಹೇಳಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಸ್ತುತ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ರಾಜೀನಾಮೆಗೆ ಆಗ್ರಹಪಡಿಸಿ ಡಿವೈಎಫ್‌ಐ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
Advertisement