Video: 'I Love you' ಹೇಳಿದ್ರೆ ಮಾತ್ರ ರೀಚಾರ್ಜ್‌ ಮಾಡ್ತೇನೆ'; ಅಂಗಡಿ ಮಾಲೀಕನಿಗೆ ವಿದ್ಯಾರ್ಥಿನಿಯರಿಂದ ಹಿಗ್ಗಾಮುಗ್ಗಾ ಥಳಿತ

ಐ ಲವ್‌ ಯು ಹೇಳಿದ್ರೆ ಮಾತ್ರ ಮೊಬೈಲ್‌ ರೀಚಾರ್ಜ್‌ ಮಾಡುವುದಾಗಿ ಹೇಳಿದ ಅಂಗಡಿ ಮಾಲೀಕನನ್ನು ನಡು ರಸ್ತೆಗೆ ಎಳೆದು ತಂದು ಸಾರ್ವಜನಿಕರ ಎದುರಲ್ಲೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
School girls slap beat up shopkeeper
ಮೊಬೈಲ್ ರಿಚಾರ್ಜ್ ಅಂಗಡಿ ಮಾಲಿಕನಿಗೆ ಥಳಿಸಿದ ವಿದ್ಯಾರ್ಥಿನಿಯರು
Updated on

ಜೈಪುರ: 'I Love you ಹೇಳಿದ್ರೆ ಮಾತ್ರ ರೀಚಾರ್ಜ್‌ ಮಾಡ್ತೇನೆ' ಎಂದ ಅಂಗಡಿ ಮಾಲೀಕನಿಗೆ ವಿದ್ಯಾರ್ಥಿನಿಯರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ದಿದ್ವಾನಾದಲ್ಲಿ ಈ ಘಟನೆ ನಡೆದಿದ್ದು, ಐ ಲವ್‌ ಯು ಹೇಳಿದ್ರೆ ಮಾತ್ರ ಮೊಬೈಲ್‌ ರೀಚಾರ್ಜ್‌ ಮಾಡುವುದಾಗಿ ಹೇಳಿದ ಅಂಗಡಿ ಮಾಲೀಕನನ್ನು ನಡು ರಸ್ತೆಗೆ ಎಳೆದು ತಂದು ಸಾರ್ವಜನಿಕರ ಎದುರಲ್ಲೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಹುಡುಗಿಯರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಶಾಲಾ ವಿದ್ಯಾರ್ಥಿನಿಯರು ಮೊಬೈಲ್‌ ರೀಚಾರ್ಜ್‌ ಮಾಡಿಸಲೆಂದು ಇಲ್ಲಿನ ಮೊಬೈಲ್‌ ಶಾಪ್‌ಗೆ ಹೋಗಿದ್ದು, ಈ ವೇಳೆ ಅಂಗಡಿ ಮಾಲೀಕ 'ಐ ಲವ್‌ ಯು' ಹೇಳಿದ್ರೆ ಮಾತ್ರ ಮೊಬೈಲ್‌ ರೀಚಾರ್ಜ್‌ ಮಾಡಿಕೊಡುವುದಾಗಿ ಅವರನ್ನು ಪೀಡಿಸಿದ್ದಾನೆ. ಇದರಿಂದ ಕೋಪಗೊಂಡ ಹುಡುಗಿಯರು, ಆತನನ್ನು ನಡು ರಸ್ತೆಗೆ ಎಳೆದು ತಂದು ಸಾರ್ವಜನಿಕರ ಎದುರಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸ್ಥಳೀಯರು ಈ ಘಟನೆಯ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಸೆಪ್ಟೆಂಬರ್‌ 1 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 1.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com