Rameshwaram Cafe blast: ತಮಿಳರ ಕ್ಷಮೆ ಯಾಚಿಸಿದ ಸಚಿವೆ ಶೋಭಾ ಕರಂದ್ಲಾಜೆ

ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟಕ್ಕೂ ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು.
Shobha Karandlaje apologises to people of Tamil Nadu
ಶೋಭಾ ಕರಂದ್ಲಾಜೆ
Updated on

ನವದೆಹಲಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಗಳವಾರ ತಮಿಳರ ಕ್ಷಮೆಯಾಚಿಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪರ ವಕೀಲರು ಮದ್ರಾಸ್​ ಕೋರ್ಟ್​ನಲ್ಲಿಂದು ಅಫಿಡವಿಟ್​ ಸಲ್ಲಿಸಿದ್ದು, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ಪ್ರಕರಣ ರದ್ದುಗೊಳಿಸುವಂತೆ ಶೋಭಾ ಪರವಾಗಿ ಮದ್ರಾಸ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ಇಂದು ಮಂಗಳವಾರ(ಸೆ.3) ಮತ್ತೆ ವಿಚಾರಣೆಗೆ ಬಂದಿದ್ದು, ಕೋರ್ಟ್​ನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದರು.

Shobha Karandlaje apologises to people of Tamil Nadu
ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ತಮಿಳಿಗರ ಕೈವಾಡ: ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹೇಳಿಕೆ ಹಿಂಪಡೆದ ಶೋಭಾ ಕರಂದ್ಲಾಜೆ

ಬಾಂಬ್ ಸ್ಫೋಟದಲ್ಲಿ ತಮಿಳರು ಭಾಗಿಯಾಗಿದ್ದಾರೆ ಎಂಬ ಹೇಳಿಕೆಯನ್ನು ತಮಿಳರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿಲ್ಲ. ಇದಲ್ಲದೆ, ಅವರ ಹೇಳಿಕೆಯು ತಮಿಳರ ಭಾವನೆಗೆ ಧಕ್ಕೆತಂದಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ತಮಿಳರ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅಫಿಡವಿಟ್​ನಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಸಚಿವೆ ಶೋಭಾ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ಅವರ ಪರವಾಗಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಇದಾದ ಬಳಿಕ ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು, ಸರ್ಕಾರದಿಂದ ಸೂಕ್ತ ಸೂಚನೆ ಪಡೆದು ತಿಳಿಸುವುದಾಗಿ ಹೇಳಿದರು.

ನಂತರ ನ್ಯಾಯಾಧೀಶರು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆ.5 ರಂದು ನಡೆಸುವುದಾಗಿ ಹೇಳಿ ಪ್ರಕರಣವನ್ನು ಮುಂದೂಡಿದರು.

ಏನಿದು ಪ್ರಕರಣ?

ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟಕ್ಕೂ ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು. ನಂತರ ಈ ಸಂಬಂಧ ಡಿಎಂಕೆಯಿಂದ ತ್ಯಾಗರಾಜನ್ ನೀಡಿದ ದೂರಿನ ಆಧಾರದ ಮೇಲೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಕೋಮುಗಲಭೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ 4 ಸೆಕ್ಷನ್‌ಗಳ ಅಡಿಯಲ್ಲಿ ಶೋಭಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com