ಹರ್ಯಾಣದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 10 ಜನಕ್ಕೆ ಗಾಯ

ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿಯ ಬಿಧರನಾ ಗ್ರಾಮದಲ್ಲಿ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಿಸಾರ್‌ನ ಜಿಂದ್ ಮತ್ತು ಆಗ್ರೋಹಾ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.
ಹರ್ಯಾಣದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 10 ಜನಕ್ಕೆ ಗಾಯ
Updated on

ಚಂಡೀಗಢ: ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಭಕ್ತರನ್ನು ಕರೆದೊಯ್ಯುತ್ತಿದ್ದ ನಿಂತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿಯ ಬಿಧರನಾ ಗ್ರಾಮದಲ್ಲಿ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಿಸಾರ್‌ನ ಜಿಂದ್ ಮತ್ತು ಆಗ್ರೋಹಾ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಸದರ್ ನರ್ವಾನಾದ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಕುಲದೀಪ್ ತಿಳಿಸಿದ್ದಾರೆ.

ಕುರುಕ್ಷೇತ್ರ ಜಿಲ್ಲೆಯಿಂದ ರಾಜಸ್ಥಾನದ ಗೊಗಮೇಡಿ ಎಂಬಲ್ಲಿನ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಭಕ್ತರ ಗುಂಪು ಗೋಗಮೇಡಿಗೆ ತೆರಳುತ್ತಿದ್ದ ಲಘು ಕಮರ್ಷಿಯಲ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ.

ಭಕ್ತಾದಿಗಳು ವಾಹನದಲ್ಲಿ ತೆರಳುತ್ತಿದ್ದ ವೇಳೆ ಸ್ವಲ್ಪ ಸಮಯದವರೆಗೆ ವಿಶ್ರಾಂತಿಗೆಂದು ನಿಲ್ಲಿಸಿದ್ದರು, ಈ ವೇಳೆ ಟ್ರಕ್ ಬಂದು ಗುದ್ದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು, ಅಪ್ರಾಪ್ತರು ಸೇರಿದಂತೆ ಎಂಟು ಮಂದಿ ಮೃತಪಟ್ಟು ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com