ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ 25 KM ಬೆನ್ನಟ್ಟಿ ಪಿಯುಸಿ ವಿದ್ಯಾರ್ಥಿ ಹತ್ಯೆ

ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಮೃತ ವಿದ್ಯಾರ್ಥಿ ಆರ್ಯನ್ ಮಿಶ್ರಾ
ಮೃತ ವಿದ್ಯಾರ್ಥಿ ಆರ್ಯನ್ ಮಿಶ್ರಾ
Updated on

ಚಂಡೀಗಢ: ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರನೆಂದು ತಪ್ಪಾಗಿ ತಿಳಿದು ಗೋರಕ್ಷಕರು ಕಾರಿನಲ್ಲಿ ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ.

ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.

ಆರ್ಯನ್ ಮಿಶ್ರಾ ಮತ್ತು ಆತನ ಸ್ನೇಹಿತರಾದ ಶಾಂಕಿ ಮತ್ತು ಹರ್ಷಿತ್ ಅವರನ್ನು ಜಾನುವಾರು ಕಳ್ಳಸಾಗಣೆದಾರರು ಎಂದು ತಪ್ಪಾಗಿ ಭಾವಿಸಿದ ಆರೋಪಿಗಳು ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯಾಣದ ಗಧಪುರಿ ಬಳಿ ಸುಮಾರು 25 ಕಿಲೋಮೀಟರ್ ವರೆಗೆ ಅವರ ಕಾರನ್ನು ಹಿಂಬಾಲಿಸಿದ್ದರು. ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವು ಜಾನುವಾರು ಕಳ್ಳಸಾಗಣೆದಾರರು ನಗರ ದಾಟಿ ಜಾನುವಾರುಗಳನ್ನು ಎತ್ತಿಕೊಂಡು ಹೋಗುತ್ತಿದ್ದಾರೆ ಎಂದು ಗೋರಕ್ಷಕರಿಗೆ ಮಾಹಿತಿ ಸಿಕ್ಕಿದೆ.

ಮೃತ ವಿದ್ಯಾರ್ಥಿ ಆರ್ಯನ್ ಮಿಶ್ರಾ
'ಬ್ಯಾಗ್ ನಲ್ಲಿ ಬೀಫ್ ತೆಗೆದುಕೊಂಡು ಹೋಗ್ತಿದ್ದೀಯಾ'?: ವೃದ್ಧ ಮುಸ್ಲಿಂ ವ್ಯಕ್ತಿಗೆ ರೈಲಿನಲ್ಲಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಯುವಕರು, Viral video

ಬಂಧಿತ ಆರೋಪಿಗಳು ಜಾನುವಾರು ಕಳ್ಳಸಾಗಾಣಿಕೆದಾರರನ್ನು ಹುಡುಕುತ್ತಿದ್ದಾಗ ಪಟೇಲ್ ಚೌಕ್‌ನಲ್ಲಿ ಡಸ್ಟರ್ ಕಾರನ್ನು ನೋಡಿದ್ದಾರೆ. ನಂತರ ಕಾರು ಚಾಲಕ ಹರ್ಷಿತ್ ನನ್ನು ನಿಲ್ಲಿಸುವಂತೆ ಹೇಳಿದರು. ಆದಾಗ್ಯೂ, ಆರ್ಯನ್ ಮತ್ತು ಅವನ ಸ್ನೇಹಿತರು ನಿಲ್ಲಿಸಿರಲಿಲ್ಲ. ಕಾರಿನಲ್ಲಿದ್ದ ಶಾಂಕಿ ಎಂಬಾತನಿಗೆ ಕೆಲವರ ಜೊತೆ ಗಲಾಟೆಗಳಾಗಿದ್ದು, ಆತ ಗೂಂಡಾಗಳನ್ನುಕಳಿಸಿದ್ದಾನೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು.

ಆರೋಪಿಗಳು ಕಾರಿನತ್ತ ಗುಂಡು ಹಾರಿಸಿದರು ಮತ್ತು ಗುಂಡು ಪ್ರಯಾಣಿಕರ ಸೀಟಿನಲ್ಲಿದ್ದ ಆರ್ಯನ್ – ಕುತ್ತಿಗೆಗೆ ತಗುಲಿತು. ಅಂತಿಮವಾಗಿ ಕಾರು ನಿಲ್ಲಿಸಿದಾಗ ಮತ್ತೆ ಗುಂಡು ಹಾರಿಸಲಾಯಿತು. ಆರೋಪಿಗಳು ಕಾರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನು ನೋಡಿದಾಗ, ಅವರು ತಪ್ಪಾದ ವ್ಯಕ್ತಿಗೆ ಗುಂಡು ಹಾರಿಸಿರುವುದು ಗೊತ್ತಾಗಿದೆ ಬಳಿಕ ಓಡಿ ಹೋಗಿದ್ದಾರೆ.

ಆರ್ಯನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಒಂದು ದಿನದ ನಂತರ ಸಾವನ್ನಪ್ಪಿದ್ದಾರೆ.‘ಘಟನೆಯಲ್ಲಿ ಬಳಸಲಾದ ಆಯುಧವೂ ಅಕ್ರಮವಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಆರೋಪಿಗಳು ಪೊಲೀಸ್ ವಶದಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com