ಬುಂದಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 28 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯು ಹಳ್ಳಿಯಲ್ಲಿರುವ ತನ್ನ ಮನೆಗೆ ವಾಪಸ್ ಹೋಗುತ್ತಿದ್ದಾಗ 52 ವರ್ಷದ ತಾಯಿ ಮೇಲೆ ಶುಕ್ರವಾರ ಅತ್ಯಾಚಾರ ಎಸಗಿದ್ದಾನೆ.
ಘಟನೆಯ ನಂತರ, ಸಂತ್ರಸ್ತ ಮಹಿಳೆ ತನ್ನ ಕಿರಿಯ ಮಗ ಮತ್ತು ಮಗಳೊಂದಿಗೆ ದಾಬಿ ಪೊಲೀಸ್ ಠಾಣೆಗೆ ಆಗಮಿಸಿ ತನ್ನ ಹಿರಿಯ ಮಗನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಮತ್ತು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಮಗನೊಂದಿಗೆ ತನ್ನ ಸಹೋದರನ ಮನೆಗೆ ಹೋಗಿದ್ದಳು. ಅಲ್ಲಿಂದ ಇಬ್ಬರೂ ಮನೆಗೆ ವಾಪಸ್ ಹೋಗುತ್ತಿದ್ದಾಗ, ಪ್ರತ್ಯೇಕ ಸ್ಥಳದಲ್ಲಿ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. "ನಾವು ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ" ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ) ತರುಂಕಂತ್ ಸೋಮಾನಿ ಹೇಳಿದ್ದಾರೆ.
Advertisement