ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ: ಕಿರಿಯ ವೈದ್ಯರ ಮುಂದುವರಿದ ಪ್ರತಿಭಟನೆ

ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಿಲ್ಲ, ಇದು ಧರಣಿ ನಿರತ ವೈದ್ಯರ ಮತ್ತೊಂದು ಬೇಡಿಕೆಯಾಗಿದೆ ಎಂದರು.
ಕಿರಿಯ ವೈದ್ಯರ ಪ್ರತಿಭಟನೆ
ಕಿರಿಯ ವೈದ್ಯರ ಪ್ರತಿಭಟನೆ
Updated on

ಕೋಲ್ಕತ್ತಾ: ಇಲ್ಲಿನ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರ ಮುಷ್ಕರ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ.

ಈಗ ಮೂರು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆ ಕಾರಣದಿಂದ ಹೆಚ್ಚಿನ ಸರ್ಕಾರಿ ವೈದ್ಯಕೀಯ ಸೌಲಭ್ಯಗಳಲ್ಲಿ ಆರೋಗ್ಯ ಸೇವೆಗಳು ದುರ್ಬಲಗೊಂಡಿವೆ. ನ್ಯಾಯಕ್ಕಾಗಿ ನಮ್ಮ ಬೇಡಿಕೆ ಇನ್ನೂ ಈಡೇರಿಲ್ಲ. ನಮ್ಮ ಸೋದರ-ಸೋದರಿಯರಿಗೆ ನ್ಯಾಯ ಸಿಗುವವರೆಗೆ ಮತ್ತು ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಕಿರಿಯ ವೈದ್ಯರೊಬ್ಬರು ಹೇಳಿದರು.

ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಿಲ್ಲ, ಇದು ಧರಣಿ ನಿರತ ವೈದ್ಯರ ಮತ್ತೊಂದು ಬೇಡಿಕೆಯಾಗಿದೆ ಎಂದರು.

ಆಗಸ್ಟ್ 9 ರಂದು ಯುವ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಹಸ್ತಾಂತರಿಸುವ ಮೊದಲು ಪೊಲೀಸರು ಅಸಮರ್ಪಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕಿರಿಯ ವೈದ್ಯರ ಪ್ರತಿಭಟನೆ
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಅಂಗೀಕಾರ; ಬಿಲ್ ನಲ್ಲಿನ ಪ್ರಮುಖ ಅಂಶಗಳೇನು?

ನಗರದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯ ನಿರತ ಸ್ನಾತಕೋತ್ತರ ತರಬೇತಿ ವೈದ್ಯೆಯ ಶವ ಪತ್ತೆಯಾಗಿದೆ. ಈ ಘಟನೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣದಲ್ಲಿ ಅನೇಕ ಜನರನ್ನು ರಕ್ಷಿಸಲಾಗಿದೆ, ಘಟನೆ ಕುರಿತು ಸತ್ಯ ಹೊರಬರಬೇಕು ಎಂದು ಸರ್ಕಾರಿ ಆಸ್ಪತ್ರೆಯ ಮತ್ತೊಬ್ಬ ಕಿರಿಯ ವೈದ್ಯರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟ್ರೇನಿ ವೈದ್ಯೆ ಶವ ಪತ್ತೆಯಾದ ಸ್ವಲ್ಪ ಸಮಯದ ನಂತರ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಯಿತು. ವೈದ್ಯಕೀಯ ಸಂಸ್ಥೆಯಲ್ಲಿ ಹಣಕಾಸಿನ ಅವ್ಯವಹಾರದ ಆರೋಪದಲ್ಲಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com