ಹೈದರಾಬಾದ್: ತೆಲಂಗಾಣ ರಾಜ್ಯದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಇಂದು ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ 6 ಮಂದಿ ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆದು 6 ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ತಿಳಿಸಿದ್ದಾರೆ.
ಛತ್ತೀಸ್ಗಢದಲ್ಲಿ 9 ನಕ್ಸಲರ ಹತ್ಯೆ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ವಲಯದ ಐಜಿ ಸುಂದರರಾಜ್ ತಿಳಿಸಿದ್ದಾರೆ.
ಛತ್ತೀಸ್‌ಗಢದ ದಾಂತೇವಾಡದಲ್ಲಿ ನಿನ್ನೆ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಒಂಬತ್ತು ನಕ್ಸಲೀಯರು ಹತರಾಗಿದ್ದರು. ದಾಂತೇವಾಡ ಮತ್ತು ಬಿಜಾಪುರ್ ಜಿಲ್ಲೆಗಳ ಗಡಿಯಲ್ಲಿ ನಕ್ಸಲೀಯರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು.
ಶೋಧ ಕಾರ್ಯಾಚರಣೆಯಲ್ಲಿ, ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಕಂಪನಿ ನಂ 2 ರಿಂದ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯಿತು. ಅವರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು ಮತ್ತು ಸೆಲ್ಫ್ ಲೋಡಿಂಗ್ ರೈಫಲ್ 303, 12 ಬೋರ್ ಗನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
Advertisement