ಉತ್ತರ ಪ್ರದೇಶ: ರೈಲು ಹರಿದು ಕಾನ್ಸ್‌ಟೇಬಲ್ ಸಾವು

ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶಹಜಹಾನ್‌ಪುರ: ರೈಲು ಹರಿದು ಕಾನ್‌ಸ್ಟೆಬಲ್ ಒಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದಿದೆ.

ಇದರಿಂದ ರೈಲ್ವೆ ಹಳಿ ಕೆಳಗೆ ಬಿದ್ದ ಅವರ ಮೇಲೆ ರೈಲು ಹರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶ: Chandigarh-Dibrugarh Express ರೈಲು ಹಳಿ ತಪ್ಪಿ ಅಪಘಾತ; 4 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಘಟನೆಯಲ್ಲಿ ಅವರ ಒಂದು ಕಾಲು ತುಂಡಾಗಿದ್ದು, ಅತಿಯಾದ ರಕ್ತಸ್ರಾವದಿಂದ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಸಿಂಗ್ ಶಾಮ್ಲಿ ಜಿಲ್ಲೆಯ ನಿವಾಸಿ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com