
ಚಂಡೀಗಢ: ಮುಂಬರುವ ಹರ್ಯಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಅಥ್ಲೀಟ್ ವಿನೇಶ್ ಫೋಗಟ್ (Vinesh Phogat) ತಮ್ಮ ಭಾರತೀಯ ರೈಲ್ವೇ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ರೆಸ್ಲರ್ ವಿನೇಶ್ ಫೋಗಟ್ ಮುಂಬರುವ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ತಮ್ಮ ರೈಲ್ವೇ ಹುದ್ದೆಗೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ''ಭಾರತೀಯ ರೈಲ್ವೇಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯವೆಂದು ನಾನು ಭಾವಿಸಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ, ನಾನು ರೈಲ್ವೆ ಸೇವೆಯಿಂದ ಪ್ರತ್ಯೇಕವಾಗಿರಲು ನಿರ್ಧರಿಸಿದ್ದೇನೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿರುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಅಂದಹಾಗೆ 30 ವರ್ಷದ ಕುಸ್ತಿಪಟು ವಿನೇಶ್ ಫೋಗಟ್ ರ ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಅವರಿಗೆ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕ ಮಾಡಲಾಗಿತ್ತು.
Advertisement