ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಗಣೇಶ ಚತುರ್ಥಿ ಹಬ್ಬವು ಅಡೆತಡೆಗಳನ್ನು ನಿವಾರಿಸುವ ಗಣೇಶನ ಜನ್ಮ ದಿನವನ್ನು ಸೂಚಿಸುತ್ತದೆ.
ಪ್ರಧಾನಿ ಮೋದಿ.
ಪ್ರಧಾನಿ ಮೋದಿ.
Updated on

ನವದೆಹಲಿ: ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪ ಮೋರ್ಯ ಎಂದು ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ, ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ. ಹಬ್ಬವನ್ನು ಸಡಗರ - ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣೇಶನೆಂದರೆ ವಿಘ್ನ ನಿವಾರಕ, ಸಂಕಟ ಹರಣ. ಈ ಗಣೇಶ ಚತುರ್ಥಿಯು ನಿಮ್ಮ ಬದುಕಿನಲ್ಲಿ ಯಶಸ್ಸು ಮತ್ತು ಶುಭವನ್ನು ತರಲಿ ಹಾಗೂ ಗಣಪನ ಕೃಪೆ ಎಲ್ಲರ ಮೇಲಿರಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಪ್ರಧಾನಿ ಮೋದಿ.
ನಾಳೆ ಗಣೇಶ ಚತುರ್ಥಿ: ಬೆಂಗಳೂರು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ರಾಜ್ಯ ಬಿಜೆಪಿ ಘಟಕ ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ವಿಘ್ನವಿನಾಶಕ ಶ್ರೀ ಗಣೇಶನು ಎಲ್ಲರಿಗೂ ಸಮೃದ್ಧಿ, ಆರೋಗ್ಯ ಭಾಗ್ಯವನ್ನು ನೀಡಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದೆ.

ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಗಣೇಶ ಚತುರ್ಥಿ ಹಬ್ಬವು ಅಡೆತಡೆಗಳನ್ನು ನಿವಾರಿಸುವ ಗಣೇಶನ ಜನ್ಮ ದಿನವನ್ನು ಸೂಚಿಸುತ್ತದೆ. ಗಣೇಶ ಚತುರ್ಥಿ ಹಬ್ಬವನ್ನು ಭಾದ್ರಪದ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬವಾಗಿದೆ. ಈ ದಿನದಂದು ಭಕ್ತರು ತಮ್ಮ ಮನೆಗೆ ಗಣೇಶನ ವಿಗ್ರಹಗಳನ್ನು ತಂದು ನೈವೇದ್ಯ ಮತ್ತು ವಿಧಿ-ವಿಧಾನಗಳೊಂದಿಗೆ ಪೂಜೆಯನ್ನು ಮಾಡುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com