ನವದೆಹಲಿ: ಖ್ಯಾತ ತಮಿಳು ನಟ ದಳಪತಿ ವಿಜಯ್ ಆರಂಭಿಸಿರುವ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ'(Tamilaga Vettri Kazhagam)ಗೆ ಕೇಂದ್ರ ಚುನಾವಣಾ ಆಯೋಗವು ಮಾನ್ಯತೆ ನೀಡಿದೆ.
ಈ ಬಗ್ಗೆ ಸ್ವತಃ ನಟ ವಿಜಯ್ ಮಾಹಿತಿ ನೀಡಿದ್ದು, 'ನಾವು ಫೆಬ್ರವರಿ 2 ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ನಮ್ಮ ಭಾರತೀಯ ಚುನಾವಣಾ ಆಯೋಗವು ನಮ್ಮ ತಮಿಳಗ ವೆಟ್ರಿ ಕಳಗಂಗೆ ಮಾನ್ಯತೆ ನೀಡಿದೆ. ಅಲ್ಲದೆ ಚುನಾವಣೆಯಲ್ಲಿ ಭಾಗವಹಿಸಲು ಅನುಮತಿ ನೀಡಿದೆ' ಎಂದು ಹೇಳಿದ್ದಾರೆ.
ಎರಡು ವಾರಗಳ ಹಿಂದೆ ವಿಜಯ್ ಟಿವಿಕೆ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ್ದರು. ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಪಕ್ಷದ ಗುರಿಯಾಗಿದೆ ಎಂದು ಟಿವಿಕೆ ಪಕ್ಷದ ಮುಖಂಡರು ತಿಳಿಸಿದ್ದಾರೆ.
Advertisement