ಛತ್ತೀಸ್‌ಗಢ: ಸಿಡಿಲು ಬಡಿದು ಏಳು ಜನರ ಸಾವು, ಮೂವರಿಗೆ ಗಾಯ

ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಲೋದಬಜಾರ್: ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಒಡಿಶಾದಲ್ಲಿ ಸಿಡಿಲು ಬಡಿದು 6 ಮಂದಿ ಸಾವು

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವ್ಯಕ್ತಿಗಳು ಸಿಡಿಲು ಬಡಿದಾಗ ಭಾರಿ ಮಳೆಯ ನಡುವೆ ತಮ್ಮ ಹೊಲದ ಬಳಿಯ ಕೆರೆಯಂಚಿನಲ್ಲಿದ್ದರು ಎನ್ನಲಾಗಿದೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com