
ಇಂದೋರ್: 2019 ರಲ್ಲಿ ಇಂದೋರ್ ಮುನ್ಸಿಪಲ್ ಕಾರ್ಪೋರೇಶನ್‌ನ ಕಟ್ಟಡ ಇನ್ಸ್‌ಪೆಕ್ಟರ್ ಮೇಲೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಧ್ಯ ಪ್ರದೇಶದ ಪ್ರಬಲ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಪುತ್ರ, ಭಾರತೀಯ ಜನತಾ ಪಕ್ಷದ ಮಾಜಿ ಶಾಸಕ ಆಕಾಶ್ ವಿಜಯವರ್ಗಿಯಾ ಅವರನ್ನು ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಸಂಸದ/ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ದೇವ್ ಕುಮಾರ್, ಆಗ ವಿರೋಧ ಪಕ್ಷದಲ್ಲಿದ್ದ ಬಿಜೆಪಿಯ ಶಾಸಕ ಆಕಾಶ್ ವಿಜಯವರ್ಗಿಯರಲ್ಲದೆ, ಪ್ರಕರಣದ ಇತರ ಒಂಬತ್ತು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.
"ಪ್ರಾಸಿಕ್ಯೂಷನ್ ನ್ಯಾಯಾಲಯದಲ್ಲಿ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನ್ಯಾಯಾಲಯ ವಿಜಯವರ್ಗಿಯಾ ಮತ್ತು ಇತರ ಒಂಬತ್ತು ಮಂದಿಯನ್ನು ಖುಲಾಸೆಗೊಳಿಸಿದೆ" ಎಂದು ಆರೋಪಿಗಳ ಪರ ವಕೀಲ ಉದಯಪ್ರತಾಪ್ ಸಿಂಗ್ ಕುಶ್ವಾಹ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
2019ರಲ್ಲಿ ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಆಕಾಶ್ ಅವರ ಬೆಂಬಲಿಗನೋರ್ವನ ಕಟ್ಟಡ ಕೆಡವಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ, ಕಟ್ಟಡ ಕೆಡವದಂತೆ ಆಕಾಶ್ ಸೂಚಿಸಿದದ್ದರು. ಆದರೆ ಮಾತು ಕೇಳದೇ ಇದ್ದ ಅಧಿಕಾರಿ ವಿರುದ್ಧ ಕೆಂಡಾಮಂಡಲರಾದ ಆಕಾಶ್ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
Advertisement