ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಜನವರಿ 1 ರವರೆಗೆ ಪಟಾಕಿ ನಿಷೇಧ

ಆನ್‌ಲೈನ್‌ನಲ್ಲೂ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published on

ನವದೆಹಲಿ: ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ.

ಆನ್‌ಲೈನ್‌ನಲ್ಲೂ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ವಾಯುಮಾಲಿನ್ಯ: ದೀಪಾವಳಿ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿದ ದೆಹಲಿ ಸರ್ಕಾರ

ಪಟಾಕಿ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವು ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ ಎಂದು ಗೋಪಾಲ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com