ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಶಿಸ್ತುಕ್ರಮ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ನ್ಯಾಯಾಲಯ ಎಚ್ಚರಿಕೆ ನೀಡಿದೆ.
ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠದಿಂದ ಆದೇಶ
ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠದಿಂದ ಆದೇಶ
Updated on

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ.

ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಕಿರಿಯ ವೈದ್ಯರು ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಕುಂದುಕೊರತೆಗಳನ್ನು ಪರಿಗಣಿಸಿ ಆದೇಶ ಹೊರಡಿಸಿದೆ.

ಕಿರಿಯ ವೈದ್ಯರು ನಾಳೆ ಸಂಜೆ 5 ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು. ಅಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ವೈದ್ಯರು ಕರ್ತವ್ಯಕ್ಕೆ ಒಂದು ವೇಳೆ ಮರಳದಿದ್ದರೆ, ರಾಜ್ಯ ಸರ್ಕಾರವು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅವರು ಕೆಲಸಕ್ಕೆ ಮರಳಿದರೆ, ಯಾವುದೇ ದಂಡನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠದಿಂದ ಆದೇಶ
Kolkata Rape and murder: ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು; ಸುಪ್ರೀಂ ಕೋರ್ಟ್ ಗೆ ಬಂಗಾಳ ಸರ್ಕಾರ ಮಾಹಿತಿ!

ವೈದ್ಯರ ಸುರಕ್ಷತೆ: ವೈದ್ಯರ ಸುರಕ್ಷತೆಗೆ ಪಶ್ಚಿಮ ಬಂಗಾಳ ಸರ್ಕಾರವು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ನ್ಯಾಯಾಲಯವು ಒತ್ತಿಹೇಳಿತು. ಪ್ರತ್ಯೇಕ ಕರ್ತವ್ಯ ಕೊಠಡಿ, ಶೌಚಾಲಯ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಸೇರಿದಂತೆ ವೈದ್ಯರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಪರಿಹರಿಸಬೇಕು. ಪುರುಷ ಮತ್ತು ಮಹಿಳಾ ವೈದ್ಯರಿಗೆ ವಿಶ್ರಾಂತಿ ಕೊಠಡಿಗಳನ್ನು ಸ್ಥಾಪಿಸುವುದು ಮತ್ತು ಸಿಸಿಟಿವಿಗಳನ್ನು ಅಳವಡಿಸುವುದು ಇದರಲ್ಲಿ ಸೇರಿದೆ. ಹೆಚ್ಚುವರಿ ಸಿಸಿಟಿವಿಗಳಿಗೆ ಹಣವನ್ನು ನಿಗದಿಪಡಿಸಲಾಗಿದೆ ಎಂದು ರಾಜ್ಯ ಪೊಲೀಸ್ ಅಫಿಡವಿಟ್ ದೃಢಪಡಿಸಬೇಕು. ಇದನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com