ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸೆ.17 ರೊಳಗೆ ತನಿಖೆಯ ಹೊಸ ಸ್ಥಿತಿ ವರದಿ ಸಲ್ಲಿಸಲು CBI ಗೆ ಸುಪ್ರೀಂ ಕೋರ್ಟ್ ಆದೇಶ

ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಆರ್‌ಜಿ ಕಾರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಸಂತ್ರಸ್ತರ ಛಾಯಾಚಿತ್ರಗಳನ್ನು ತಕ್ಷಣ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸಿದ ಸಂಗ್ರಹ ಚಿತ್ರ.
ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸಿದ ಸಂಗ್ರಹ ಚಿತ್ರ.
Updated on

ನವದೆಹಲಿ: ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಪ್ಟೆಂಬರ್ 17ರೊಳಗೆ ಹೊಸ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳಕ್ಕೆ (CBI)ಗೆ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಸ್ವಯಂಪ್ರೇರಿತವಾಗಿ ಪ್ರಕರಣದ ತನಿಖೆ ನಡೆಸುತ್ತಿದೆ.

ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯೆಯ ಅಸಹಜ ಸಾವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ಆಗಸ್ಟ್ 22ರಂದು ತರಾಟೆಗೆ ತೆಗೆದುಕೊಂಡಿತ್ತು. ಇದೊಂದು ಅತ್ಯಂತ ಭಯಾನಕ ಕೃತ್ಯವಾಗಿದ್ದು, ನಂತರ ಪೊಲೀಸರ ತನಿಖೆಯ ಶೈಲಿಯನ್ನು ಪ್ರಶ್ನಿಸಿತ್ತು.

ಅದರ ನಂತರ ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಶಿಷ್ಟಾಚಾರಗಳನ್ನು ರೂಪಿಸಲು ಉನ್ನತ ನ್ಯಾಯಾಲಯವು 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF) ನ್ನು ರಚಿಸಿತ್ತು. ಘಟನೆಯನ್ನು ಭಯಾನಕ ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾವಿರಾರು ಜನರಿಗೆ ಸರ್ಕಾರಿ ಸೌಲಭ್ಯ ನೀಡುವ ಸಂಸ್ಥೆಯ ಸಾಧನಗಳನ್ನು ಧ್ವಂಸ ಮಾಡಲು ದುಷ್ಕರ್ಮಿಗಳಿಗೆ ಅವಕಾಶ ಸಿಕ್ಕಿದ್ದು ಹೇಗೆ ಎಂದು ಪ್ರಶ್ನಿಸಿತ್ತು.

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸಿದ ಸಂಗ್ರಹ ಚಿತ್ರ.
Kolkata Rape and murder: ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು; ಸುಪ್ರೀಂ ಕೋರ್ಟ್ ಗೆ ಬಂಗಾಳ ಸರ್ಕಾರ ಮಾಹಿತಿ!

ಸುಪ್ರೀಂ ಕೋರ್ಟ್ ಆದೇಶದ ಪ್ರಮುಖಾಂಶಗಳು: ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಭದ್ರತೆ: ಸಿಐಎಸ್‌ಎಫ್‌ಗೆ ಅಗತ್ಯವಿರುವ ಎಲ್ಲಾ ರಿಕ್ವಿಸಿಷನ್, ಸೆಕ್ಯುರಿಟಿ ಗ್ಯಾಜೆಟ್‌ಗಳನ್ನು ಇಂದೇ ಹಸ್ತಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಆರ್ ಜಿ ಕಾರ್ ಭದ್ರತೆ: ಸಿಐಎಸ್‌ಎಫ್‌ನ ಎಲ್ಲಾ ಮೂರು ತುಕಡಿಗಳಿಗೆ ವಸತಿ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರದ ಗೃಹ ಇಲಾಖೆಯ ಹಿರಿಯ ಅಧಿಕಾರಿ, ಹಿರಿಯ ಸಿಐಎಸ್‌ಎಫ್ ಅಧಿಕಾರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ತನಿಖಾ ಸಂಸ್ಥೆಯು ಫೋರೆನ್ಸಿಕ್ ಮಾದರಿಗಳನ್ನು ಏಮ್ಸ್‌ಗೆ ಕಳುಹಿಸಲು ನಿರ್ಧರಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿಕೆ.

ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಆರ್‌ಜಿ ಕಾರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಸಂತ್ರಸ್ತರ ಛಾಯಾಚಿತ್ರಗಳನ್ನು ತಕ್ಷಣ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com