ಜಮ್ಮು-ಕಾಶ್ಮೀರ: ಎಲ್‌ಒಸಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ

ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Updated on

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
ಕಾಶ್ಮೀರ: ಎಲ್ ಒಸಿ ಬಳಿ ಗುಂಡಿನ ದಾಳಿ, ಇಬ್ಬರು ಯೋಧರಿಗೆ ಗಾಯ

ಎಲ್‌ಒಸಿಯನ್ನು ಕಾವಲು ಕಾಯುತ್ತಿರುವ ಸೇನಾ ಪಡೆಗಳು ಕತ್ತಲೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರರ ಚಲನವಲನ ಅರಿತು ಗುಂಡಿನ ದಾಳಿ ನಡೆಸಿದ್ದಾರೆ. ಇದು ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಕಾರ್ಯ ಪ್ರಾರಂಭಿಸುವ ಮೊದಲು ಪ್ರದೇಶದಲ್ಲಿ ಕಟ್ಟುನಿಟ್ಟಾದ ಕಣ್ಗಾವಲು ಇರಿಸಲಾಗಿತ್ತು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com