ಹೇಮಾ ಸಮಿತಿ ವರದಿ ಆಧರಿಸಿ ಕಾನೂನು ಕ್ರಮ ಏಕೆ ಕೈಗೊಂಡಿಲ್ಲ: ಕೇರಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

2019ರಲ್ಲೇ ವರದಿ ಬಂದಿದ್ದರೂ ರಾಜ್ಯ ಸರ್ಕಾರ ಇಲ್ಲಿಯವರೆಗೂ ಏಕೆ ನಿಷ್ಕ್ರಿಯವಾಗಿ ಕುಳಿತಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ವರದಿ ಹಿಡಿದುಕೊಂಡು ಕುಳಿತಿರುವುದು ಬಿಟ್ಟರೆ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ಏನನ್ನೂ ಮಾಡಿಲ್ಲ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.
ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್
Updated on

ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಬಹಿರಂಗಪಡಿಸಿರುವ ನ್ಯಾಯಮೂರ್ತಿ ಕೆ ಹೇಮಾ ಸಮಿತಿ ವರದಿ ಆಧರಿಸಿ ಕಾನೂನು ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ಕೇರಳ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

2019ರಲ್ಲೇ ವರದಿ ಬಂದಿದ್ದರೂ ರಾಜ್ಯ ಸರ್ಕಾರ ಇಲ್ಲಿಯವರೆಗೂ ಏಕೆ ನಿಷ್ಕ್ರಿಯವಾಗಿ ಕುಳಿತಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ವರದಿ ಹಿಡಿದುಕೊಂಡು ಕುಳಿತಿರುವುದು ಬಿಟ್ಟರೆ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ಏನನ್ನೂ ಮಾಡಿಲ್ಲ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಎ.ಕೆ. ಜಯಶಂಕರ ನಂಬಿಯಾರ್ ಮತ್ತು ನ್ಯಾಯಮೂರ್ತಿ ಸಿ.ಎಸ್.ಸುಧಾ ಅವರನ್ನೊಳಗೊಂಡ ವಿಶೇಷ ಪೀಠವು, ಹೇಮಾ ಸಮಿತಿಯ ಸಂಪೂರ್ಣ ವರದಿಯನ್ನು ಈಗಾಗಲೇ ಈ ವಿಷಯದ ಬಗ್ಗೆ ದೂರುಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ (SIT) ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದರು.

ಕೇರಳ ಹೈಕೋರ್ಟ್
‘ಮಲಯಾಳಂ ಸಿನೆಮಾರಂಗದಲ್ಲಿ ಯಾವುದೇ ಪವರ್ ಗ್ರೂಪ್ ಇಲ್ಲ’: ಹೇಮಾ ಸಮಿತಿ ವರದಿ ಬಗ್ಗೆ ಮೌನ ಮುರಿದ ನಟ ಮಮ್ಮೂಟ್ಟಿ

ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಲೈಂಗಿಕ ಶೋಷಣೆ ಮತ್ತು ಕಿರುಕುಳದ ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ತಿರುವನಂತಪುರದ ನವಾಸ್ ಎ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ ಪೀಠವು ಈ ಆದೇಶ ನೀಡಿದೆ. ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಅರ್ಜಿಗಳನ್ನೂ ಪೀಠ ಪರಿಗಣಿಸುತ್ತಿದೆ.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಗೋಪಾಲಕೃಷ್ಣ ಕುರುಪ್ ಅವರು, ಲೈಂಗಿಕ ದೌರ್ಜನ್ಯದ ದೂರುಗಳ ಬಗ್ಗೆ ಪರಿಶೀಲಿಸಲು ಡಿಜಿಪಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳು ದಾಖಲಾಗಿದ್ದು, ಎಸ್‌ಐಟಿಗೆ ವರ್ಗಾಯಿಸಲಾಗಿದೆ. ಆದಾಗ್ಯೂ, ಈ ಪ್ರಕರಣಗಳು ವರದಿಯ ಬಿಡುಗಡೆಯ ನಂತರ ದಾಖಲಾಗುವ ದೂರುಗಳನ್ನು ಆಧರಿಸಿದ್ದು, ನೇರವಾಗಿ ವರದಿಯ ಮೇಲೆ ಅಲ್ಲ ಎಂದರು.

ಕೇರಳ ಹೈಕೋರ್ಟ್
ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ FIRE ಮನವಿ

ಹೇಮಾ ಸಮಿತಿ ವರದಿಯನ್ನು ಪ್ರಕಟಿಸದಂತೆ ನಿರ್ದಿಷ್ಟವಾಗಿ ಶಿಫಾರಸು ಮಾಡಿದೆ. ಮಹಿಳೆಯರಿಂದ ಬಹಿರಂಗಗೊಂಡ ಲೈಂಗಿಕ ದೌರ್ಜನ್ಯ, ಕಿರುಕುಳ ವಿವರಗಳನ್ನು ಒಳಗೊಂಡಿರುವುದರಿಂದ ವರದಿಯನ್ನು ಗೌಪ್ಯವಾಗಿಡಲು ಸೂಚಿಸಿ ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಗೆ ಪತ್ರವನ್ನು ಕಳುಹಿಸಿದೆ ಎಂದು ಅಡ್ವೊಕೇಟ್ ಜನರಲ್ ಹೇಳಿದರು.

ಇದನ್ನು ಆಲಿಸಿದ ಪೀಠವು, ರಾಜ್ಯ ಸರ್ಕಾರವು ವರದಿಯನ್ನು ಸ್ವೀಕರಿಸಿದಾಗ ಅಥವಾ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಫೆಬ್ರವರಿ 2021 ರಲ್ಲಿ ಪ್ರತಿಯನ್ನು ಸ್ವೀಕರಿಸಿದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು ಎಂದು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com