CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!

72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.
CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
Updated on

ನವದೆಹಲಿ: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಗಂಭೀರವಾಗಿದ್ದು, ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಸಿಪಿಐ ತಿಳಿಸಿದೆ.

72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ. ಈ ಸಮಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು CPI ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಸೀತಾರಾಂ ಯೆಚೂರಿ ಅವರ ಕಾಯಿಯಿಲೆಯ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಯೆಚೂರಿ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಗೆ ಸೇರಿದರು.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದಾಗ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರನ್ನು ಬಂಧಿಸಲಾಗಿತ್ತು. 1977 ಮತ್ತು 1988 ರ ನಡುವೆ ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಮರು ಆಯ್ಕೆ

2004 ರಲ್ಲಿ ಯುಪಿಎ ಸರ್ಕಾರವನ್ನು ರಚಿಸುವಲ್ಲಿ ಸೀತಾರಾಂ ಯೆಚೂರಿ ಮಹತ್ವದ ಪಾತ್ರವನ್ನು ವಹಿಸಿದರು. ಇತ್ತೀಚೆಗೆ 45 ಲ್ಯಾಟರಲ್ ಎಂಟ್ರಿ ಅಧಿಕಾರಿಗಳ ನೇಮಕ ಜಾಹೀರಾತು ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯೆಚೂರಿ ತೀವ್ರ ಟೀಕೆ ಮಾಡಿದ್ದರು. ನಂತರ ಕೇಂದ್ರ ಸರ್ಕಾರ ಆ ಹುದ್ದೆಗಳ ಜಾಹೀರಾತನ್ನು ಹಿಂಪಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com