ಕೋಲ್ಕತ್ತ: ಚಲಿಸುತ್ತಿದ್ದ ಬಸ್ಸಿನೊಳಗೆ ಯುವತಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಬೆಳಗ್ಗೆ 9-30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೂಡಲೇ ಯುವತಿ ಚೀರಾಡಿದಾಗ ಸಹ ಪ್ರಯಾಣಿಕರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತ: ಚಲಿಸುತ್ತಿದ್ದ ಬಸ್ಸಿನೊಳಗೆ ಯುವತಿಗೆ ಸಹ ಪ್ರಯಾಣಿನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೋಲ್ತತ್ತದ ಕಸ್ಬಾ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಬೆಳಗ್ಗೆ 9-30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೂಡಲೇ ಯುವತಿ ಚೀರಾಡಿದಾಗ ಸಹ ಪ್ರಯಾಣಿಕರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಆರೋಪಿ ಬಸ್ಸಿನಿಂದ ಇಳಿದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಸ್ಥಳದಲ್ಲಿದ್ದ ಪೊಲೀಸರು ಆತನನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಲೈಂಗಿಕ ಕಿರುಕುಳ: ಚನ್ನಪಟ್ಟಣ ಗ್ರಾಮಾಂತರ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಆರೋಪಿ ಬಂಧನ ನಂತರ ಯುವತಿ ಕಸ್ಬಾ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

20 ವರ್ಷದ ಯುವತಿ ಕಸ್ಬಾದಿಂದ ತಾನು ಕೆಲಸ ಮಾಡುತ್ತಿದ್ದ ಫೂಲ್ ಬಾಗನ್ ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com