ಅಮಿತ್ ಶಾ - ರಾಹುಲ್ ಗಾಂಧಿ
ಅಮಿತ್ ಶಾ - ರಾಹುಲ್ ಗಾಂಧಿ

ರಾಹುಲ್ ಗಾಂಧಿ ಹೇಳಿಕೆಯಿಂದ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನಿಲುವು ಬಹಿರಂಗ: ಅಮಿತ್ ಶಾ

ರಾಹುಲ್ ಗಾಂಧಿಗೆ ತಮ್ಮ ವಿದೇಶಿ ಭೇಟಿಯ ಸಂದರ್ಭದಲ್ಲಿ ದೇಶ ವಿರೋಧಿ ಹೇಳಿಕೆ ನೀಡುವುದು "ಅಭ್ಯಾಸವಾಗಿದೆ" ಎಂದು ಅಮಿತ್ ಶಾ ಟೀಕಿಸಿದ್ದಾರೆ.
Published on

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿಗೆ ತಮ್ಮ ವಿದೇಶಿ ಭೇಟಿಯ ಸಂದರ್ಭದಲ್ಲಿ ದೇಶ ವಿರೋಧಿ ಹೇಳಿಕೆ ನೀಡುವುದು "ಅಭ್ಯಾಸವಾಗಿದೆ" ಎಂದು ಟೀಕಿಸಿದ ಅಮಿತ್ ಶಾ, ಅವರು ನಿಯಮಿತವಾಗಿ ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತಮ್ಮ "ಎಕ್ಸ್" ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದಾರೆ.

ದೇಶ ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿದೆ. ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ದೇಶವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರುವುದಿರಲಿ ಅಥವಾ ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದಿರಲಿ. ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಅಮಿತ್ ಶಾ - ರಾಹುಲ್ ಗಾಂಧಿ
ಕಳೆದ 10 ವರ್ಷಗಳಿಂದ ಹದಗೆಟ್ಟು ಹೋಗಿದ್ದ ಭಾರತದ ಪ್ರಜಾಪ್ರಭುತ್ವ ಈಗ ಪುನಶ್ಚೇತನಗೊಳ್ಳುತ್ತಿದೆ: ರಾಹುಲ್ ಗಾಂಧಿ

ರಾಹುಲ್ ಗಾಂಧಿಯ ಇತ್ತೀಚಿನ ಹೇಳಿಕೆಗಳು ಪ್ರಾದೇಶಿಕತೆ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಯನ್ನು ಪ್ರಚೋದಿಸುವ ಕಾಂಗ್ರೆಸ್‌ನ ತಂತ್ರವನ್ನು ಬಹಿರಂಗಪಡಿಸುತ್ತದೆ ಎಂದು ಅಮಿತ್ ಶಾ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಮೀಸಲಾತಿ ರದ್ದತಿಯನ್ನು ಪ್ರತಿಪಾದಿಸುವ ಮೂಲಕ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ ಎಂದು ಅಮಿತ್ ಶಾ ತಿರುಗೇಟು ನೀಡಿದ್ದಾರೆ.

"ಬಿಜೆಪಿ ಅಧಿಕಾರದಲ್ಲಿರುವವರೆಗೂ ಯಾರೂ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಪೋಸ್ಟ್ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com