
ಲಖೀಂಪುರ: ಇನ್‌ಸ್ಟಾಗ್ರಾಮ್ ರೀಲ್ಸ್ ಗಾಗಿ ಬುಧವಾರ ಬೆಳಗ್ಗೆ ಹಳಿಗಳ ಮೇಲೆ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ, ಆತನ ಪತ್ನಿ ಹಾಗೂ ಅವರ ಮೂರು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸೀತಾಪುರ ಜಿಲ್ಲೆಯ ಲಹರ್‌ಪುರದ ಶೇಖ್ ಟೋಲಾ ನಿವಾಸಿ ಮೊಹಮ್ಮದ್ ಅಹ್ಮದ್(26), ಅವರ ಪತ್ನಿ ನಜ್ನೀನ್ (24) ಮತ್ತು ಅವರ ಮೂರು ವರ್ಷದ ಮಗ ಅಬ್ದುಲ್ಲಾ ಎಂದು ಗುರುತಿಸಲಾಗಿದೆ.
ಈ ಕುಟುಂಬ ರೈಲು ಹಳಿ ಮೇಲೆ ರೀಲ್ಸ್ ಮಾಡುತ್ತಿದ್ದಾಗ ವೇಗವಾಗಿ ಬಂದ ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಖೇರಿ ಟೌನ್ ಕೊತ್ವಾಲಿ ಉಸ್ತುವಾರಿ ಅಜೀತ್ ಕುಮಾರ್ ಅವರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement