ಸಿಜೆಐ ಡಿವೈ ಚಂದ್ರಚೂಡ್ ನಿವಾಸದಲ್ಲಿ ಗಣಪತಿಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಗಣಪತಿಗೆ ಆರತಿ ಮಾಡಿದರು.
ನರೇಂದ್ರ ಮೋದಿ-ಡಿವೈ ಚಂದ್ರಚೂಡ್
ನರೇಂದ್ರ ಮೋದಿ-ಡಿವೈ ಚಂದ್ರಚೂಡ್TNIE
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಗಣಪತಿಗೆ ಆರತಿ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ಮರಾಠಿ ಬಿಳಿ ಟೋಪಿ ಧರಿಸಿ ಕಾಣಿಸಿಕೊಂಡರು.

ಇಡೀ ದೇಶವೇ 10 ದಿನಗಳ ಗಣಪತಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದೆ. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಗಣೇಶ ಪೂಜೆಯನ್ನು ಆಯೋಜಿಸಲಾಗಿದೆ. ಇದೇ ವೇಳೆ ದೆಹಲಿಯ ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿ ಆಯೋಜಿಸಿದ್ದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.

ಗಣೇಶ ಪೂಜೆಯ ಚಿತ್ರವನ್ನು ಸಾಮಾಜಿಕ ತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗಣೇಶ ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಬರೆದಿದ್ದಾರೆ.

ನರೇಂದ್ರ ಮೋದಿ-ಡಿವೈ ಚಂದ್ರಚೂಡ್
ಆಯುಷ್ಮಾನ್ ಭಾರತ್ ಕುರಿತು ಕೇಂದ್ರದ ಮಹತ್ವದ ನಿರ್ಧಾರ: 70 ವರ್ಷ ಮೇಲ್ಪಟ್ಟ ವೃದ್ಧರಿಗೆ 5 ಲಕ್ಷ ರೂ ವರೆಗೆ ಉಚಿತ ಚಿಕಿತ್ಸೆ!

ವಿಡಿಯೋದಲ್ಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರು ಪ್ರಧಾನಿ ಮೋದಿಯವರನ್ನು ತಮ್ಮ ಮನೆಗೆ ಸ್ವಾಗತಿಸುತ್ತಿರುವುದು ಕಂಡುಬಂದಿದೆ. ನಂತರ ಮೋದಿ ಅವರು ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com