ನವದೆಹಲಿ: ನೆರೆಯ ಪಾಕಿಸ್ತಾನದಲ್ಲಿ ಬುಧವಾರ ಮಧ್ಯಾಹ್ನ 12:58 ಕ್ಕೆ 5. 8 ತೀವ್ರತೆಯ ಭೂಕಂಪನದ ನಂತರ ದೆಹಲಿ-ಎನ್‌ಸಿಆರ್ ಮತ್ತು ಇತರ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಇಂದು ಮಧ್ಯಾಹ್ನ 12:58 ರ ಸುಮಾರಿಗೆ ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ" ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಭೂಕಂಪದ ಕೇಂದ್ರಬಿಂದು ಪಂಜಾಬ್‌ನ ಅಮೃತಸರದಿಂದ ಪಶ್ಚಿಮಕ್ಕೆ 415 ಕಿಲೋಮೀಟರ್ ದೂರದಲ್ಲಿದ್ದು, ರಾಷ್ಟ್ರ ರಾಜಧಾನಿಯಲ್ಲೂ ಕಂಪನದ ಅನುಭವವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ತಿಳಿಸಿದೆ.
ಸದ್ಯಕ್ಕೆ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Advertisement