ಕಾಶ್ಮೀರ: ಕಥುವಾದಲ್ಲಿ ಇಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಪ್ರದೇಶದ ಕಥುವಾ-ಬಸಂತಗಢ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಸಮೀಪದ ಕಥುವಾದಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸೈನಿಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಪ್ರದೇಶದ ಕಥುವಾ-ಬಸಂತಗಢ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ.

ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಥುವಾದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ತೀವ್ರ ಗುಂಡಿನ ಚಕಮಕಿ ನಡೆಯಿತು ಎಂದು ಜಮ್ಮುವಿನ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಎಲ್‌ಒಸಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ

ಇನ್ನಷ್ಟು ಉಗ್ರರು ಅಡಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಹತರಾದ ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಸೇನೆ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com