ಬಲವಂತವಾಗಿ ರಷ್ಯಾ ಸೈನ್ಯಕ್ಕೆ ಸೇರಿಸಲಾಗಿದ್ದ 45 ಭಾರತೀಯರ ಬಿಡುಗಡೆ: MEA

ಪ್ರಸ್ತುತ ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುತ್ತಿರುವ ಉಳಿದ 50 ಭಾರತೀಯರನ್ನು ಮರಳಿ ಕರೆತರಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ರಣಧೀರ್ ಜೈಸ್ವಾಲ್ ಅವರು ತಿಳಿಸಿದ್ದಾರೆ.
ರಣಧೀರ್ ಜೈಸ್ವಾಲ್
ರಣಧೀರ್ ಜೈಸ್ವಾಲ್
Updated on

ನವದೆಹಲಿ: ಬಲವಂತವಾಗಿ ರಷ್ಯಾದ ಸೇನೆಗೆ ಸೇರಿಸಿ, ಉಕ್ರೇನ್ ವಿರುದ್ಧದ ಹೋರಾಟಕ್ಕೆ ನಿಯೋಜಿಸಲಾಗಿದ್ದ 45 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಗುರುವಾರ ಮಾಹಿತಿ ನೀಡಿದ್ದಾರೆ.

ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ ನಂತರ 35 ಭಾರತೀಯರನ್ನು ರಷ್ಯಾ ಸೇನೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ಭೇಟಿಗೂ ಮುನ್ನ 10 ಭಾರತೀಯ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಜೈಸ್ವಾಲ್ ಹೇಳಿದ್ದಾರೆ.

ಪ್ರಸ್ತುತ ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುತ್ತಿರುವ ಉಳಿದ 50 ಭಾರತೀಯರನ್ನು ಮರಳಿ ಕರೆತರಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಣಧೀರ್ ಜೈಸ್ವಾಲ್
ರಷ್ಯಾ ಸೇನೆಯಲ್ಲಿರುವ 50 ಭಾರತೀಯರು ಶೀಘ್ರದಲ್ಲಿಯೇ ಬಿಡುಗಡೆ: MEA

ಮಾಧ್ಯಮ ವರದಿಗಳ ಪ್ರಕಾರ, ಉತ್ತಮ ಉದ್ಯೋಗ ಅಥವಾ ಶೈಕ್ಷಣಿಕ ಅವಕಾಶಗಳ ಹುಡುಕಾಟದಲ್ಲಿದ್ದ ಸುಮಾರು ನೂರು ಭಾರತೀಯರು ವಂಚಕರಿಂದ ಮೋಸ ಹೋಗಿ ರಷ್ಯಾ ಸೈನ್ಯಕ್ಕೆ ಸೇರಿದ್ದಾರೆ ಮತ್ತು ಅವರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ನಿಯೋಜಿಸಲಾಗಿತ್ತು.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಕನಿಷ್ಠ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಜುಲೈನಲ್ಲಿ ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ, ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ರಷ್ಯಾ ಸೈನ್ಯದಲ್ಲಿರುವ ಭಾರತೀಯರನ್ನು ಉಕ್ರೇನ್‌ ಯುದ್ಧದಲ್ಲಿ ಬಳಸಿಕೊಳ್ಳಲಾಗಿದೆ. ಅವರನ್ನು ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿಸಿದ ಪುಟಿನ್‌ ಅವರು, ಸೈನ್ಯದಲ್ಲಿರುವ ಭಾರತೀಯರನ್ನು ವಾಪಸ್‌ ಕಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com