ವಿಎಚ್‌ಪಿ ಸಭೆಯಲ್ಲಿ ಹಿಜಾಬ್ ನಿಷೇಧ ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಭಾಗಿ

ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದಿದ್ದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಡೆದ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದರು.
ವಿಎಚ್ ಪಿ ಸಾಂದರ್ಭಿಕ ಚಿತ್ರ
ವಿಎಚ್ ಪಿ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್‌ ಮಾಜಿ ನ್ಯಾಯಾಧೀಶರೊಬ್ಬರು ಇತ್ತೀಚೆಗೆ ದೆಹಲಿಯಲ್ಲಿ ವಿಶ್ವ ಹಿಂದೂ ಪರಿಷತ್‌(ವಿಎಚ್‌ಪಿ)ನ ಕಾನೂನು ಘಟಕ ಆಯೋಜಿಸಿದ್ದ “ನ್ಯಾಯಾಧೀಶರ ಸಭೆ”ಯಲ್ಲಿ ಭಾಗವಹಿಸಿದ್ದರು.

ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದಿದ್ದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಡೆದ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದರು.

“ನಾನು ಭಾರತದ ಪ್ರಜೆಯಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ನಿವೃತ್ತಿಯ ನಂತರ ನಿವೃತ್ತ ನ್ಯಾಯಾಧೀಶರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು. ನಾನು ಇತರರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ದೇಶದ ಯಾವುದೇ ಇತರ ನಾಗರಿಕರಂತೆ ಪ್ರಸ್ತುತ ಸಮಸ್ಯೆಗಳು ಮತ್ತು ವಿಷಯಗಳ ಬಗ್ಗೆ ವೇದಿಕೆಗಳಲ್ಲಿ ಚರ್ಚಿಸಲು ನನಗೆ ಸ್ವಾತಂತ್ರ್ಯವಿದೆ ಎಂದು ಹೇಮಂತ್ ಗುಪ್ತಾ ಹೇಳಿದ್ದಾರೆ.

ವಿಎಚ್ ಪಿ ಸಾಂದರ್ಭಿಕ ಚಿತ್ರ
CJI ಚಂದ್ರಚೂಡ್ ನಿವಾಸದ ಗಣಪತಿ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ; ವಿಪಕ್ಷಗಳ ಆಕ್ಷೇಪ

ವಾರಣಾಸಿ ಮತ್ತು ಮಥುರಾ ದೇವಸ್ಥಾನಗಳ ಸ್ಥಿತಿಗತಿ, ವಕ್ಫ್(ತಿದ್ದುಪಡಿ) ಮಸೂದೆ ಮತ್ತು ಧಾರ್ಮಿಕ ಮತಾಂತರದ ಕುರಿತ ಕಳವಳ ಸೇರಿದಂತೆ ಹಿಂದುತ್ವ ಸಂಘಟನೆಗಳು ಎತ್ತಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವರದಿಗಳನ್ನು ಉಲ್ಲೇಖಿಸಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com