ಸೀತಾರಾಂ ಯಚೂರಿ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರಿಂದ ಸಂತಾಪ

ಯೆಚೂರಿ ಎಡಪಕ್ಷಗಳ ಪ್ರಮುಖ ಬೆಳಕಾಗಿದ್ದರು. ಬೇರೆ ಬೇರೆ ರಾಜಕೀಯ ಪಕ್ಷಗಳೊಂದಿಗೂ ಸಂಪರ್ಕ ಸಾಧಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದರು. ಪರಿಣಾಮಕಾರಿ ಸಂಸದೀಯ ಪಟುವಾಗಿಯೂ ಗುರುತಿಸಿಕೊಂಡರು
ಸೀತಾರಾಂ ಯೆಚೂರಿ
ಸೀತಾರಾಂ ಯೆಚೂರಿ
Updated on

ಬೆಂಗಳೂರು: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಂ ಯೆಚೂರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಸೀತಾರಾ ಯೆಚೂರಿ ಎಡಪಕ್ಷಗಳ ಪ್ರಮುಖ ಬೆಳಕಾಗಿದ್ದರು. ಬೇರೆ ಬೇರೆ ರಾಜಕೀಯ ಪಕ್ಷಗಳೊಂದಿಗೂ ಸಂಪರ್ಕ ಸಾಧಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದರು. ಪರಿಣಾಮಕಾರಿ ಸಂಸದೀಯ ಪಟುವಾಗಿಯೂ ಗುರುತಿಸಿಕೊಂಡರು ಎಂದು ಸ್ಮರಿಸಿದ್ದಾರೆ.

ಸೀತಾರಾಂ ಯೆಚೂರಿ
ಸಾವಿನಲ್ಲೂ ಸಾರ್ಥಕತೆ ಮೆರೆದ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು. ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ಯುಪಿಎ ಸರ್ಕಾರದ 'ಸಾಮಾನ್ಯ ಕನಿಷ್ಠ ಕಾರ್ಯಕ್ರಮ' ರಚನೆಯಲ್ಲಿಯೂ ಅವರದ್ದೇ ಪ್ರಧಾನ ಪಾತ್ರ ಇತ್ತು. ಕಳೆದ ವರ್ಷ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು. ಈಗಿನ 'ಇಂಡಿಯಾ' ಒಕ್ಕೂಟ ಸ್ಥಾಪನೆಯಲ್ಲಿಯೂ ಅವರ ಕೊಡುಗೆ ಇದೆ. ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com