ಸಿಜೆಐ ಚಂದ್ರಚೂಡ್ ನಿವಾಸದಲ್ಲಿ ಪ್ರಧಾನಿ ಮೋದಿ ಗಣೇಶ ಪೂಜೆ: ಆಘಾತಕಾರಿ, ಕೆಟ್ಟ ಸಂದೇಶ ಎಂದ ಪ್ರಶಾಂತ್ ಭೂಷಣ್

ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು ಮತ್ತು ಕೆಲವು ವಿರೋಧ ಪಕ್ಷದ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ-ಡಿವೈ ಚಂದ್ರಚೂಡ್
ನರೇಂದ್ರ ಮೋದಿ-ಡಿವೈ ಚಂದ್ರಚೂಡ್TNIE
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು ಮತ್ತು ಕೆಲವು ವಿರೋಧ ಪಕ್ಷದ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಸಿಜೆಐ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ನರೇಂದ್ರ ಮೋದಿ ಅವರು ಗಣೇಶ ಪೂಜೆಯಲ್ಲಿ ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ.

ಹಿರಿಯ ವಕೀಲೆ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್, ಇಂದಿರಾ ಜೈಸಿಂಗ್ ಅವರು ಈ ಕಾರ್ಯಕ್ರಮವನ್ನು ಖಂಡಿಸುವಂತೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್​​(SCBA)ಗೆ ಒತ್ತಾಯಿಸಿದ್ದಾರೆ.

ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಜೈಸಿಂಗ್ ಅವರು, ಇಂತಹ ಸಾರ್ವಜನಿಕ ಪ್ರದರ್ಶನಗಳು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಗೆರೆಗಳನ್ನು ಮಸುಕುಗೊಳಿಸುತ್ತವೆ ಎಂದು ಪ್ರತಿಪಾದಿಸಿದ್ದಾರೆ.

ನರೇಂದ್ರ ಮೋದಿ-ಡಿವೈ ಚಂದ್ರಚೂಡ್
ಸಿಜೆಐ ಡಿವೈ ಚಂದ್ರಚೂಡ್ ನಿವಾಸದಲ್ಲಿ ಗಣಪತಿಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

“ಭಾರತದ ಮುಖ್ಯ ನ್ಯಾಯಮೂರ್ತಿಗಳು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರವನ್ನು ಬೇರ್ಪಡಿಸುವಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಸ್ವಾತಂತ್ರ್ಯದ ಮೇಲಿನ ಎಲ್ಲಾ ವಿಶ್ವಾಸವನ್ನು ಕಳೆದುಕೊಂಡಿತು. ಸಾರ್ವಜನಿಕವಾಗಿ ಪ್ರದರ್ಶಿಸಲಾದ ಈ ರಾಜಿಯನ್ನು SCBA ಖಂಡಿಸಬೇಕು ” ಎಂದು ಜೈಸಿಂಗ್ ಬರೆದುಕೊಂಡಿದ್ದಾರೆ.

ಇನ್ನು ಪ್ರಧಾನಿಗೆ ಆತಿಥ್ಯ ನೀಡುವ ಸಿಜೆಐ ನಿರ್ಧಾರವನ್ನು ಖಂಡಿಸಿದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಸಿಜೆಐ ನಿವಾಸಕ್ಕೆ ಪ್ರಧಾನಿ ಅವರ ಖಾಸಗಿ ಭೇಟಿಗೆ ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಆಘಾತಕಾರಿಯಾಗಿದೆ. ಇದು ಕೆಟ್ಟ ಸಂದೇಶವನ್ನು ರವಾನಿಸುತ್ತಿದೆ ಎಂದು ಹೇಳಿದ್ದಾರೆ.

ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಸ್ಪಷ್ಟವಾದ ಪ್ರತ್ಯೇಕತೆಯ ಅಗತ್ಯವನ್ನು ಒತ್ತಿ ಹೇಳಿದ ಭೂಷಣ್, 'ನ್ಯಾಯಾಧೀಶರ ನೀತಿ ಸಂಹಿತೆ'ಯನ್ನು ಉಲ್ಲೇಖಿಸಿದ್ದಾರೆ. "ಒಬ್ಬ ನ್ಯಾಯಾಧೀಶರು ತಮ್ಮ ಕಚೇರಿಯ ಘನತೆಗೆ ಅನುಗುಣವಾಗಿ ವೈರಾಗ್ಯದ ಮಟ್ಟವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಅವರು ಹೊಂದಿರುವ ಉನ್ನತ ಹುದ್ದೆಗೆ ಮತ್ತು ಆ ಕಚೇರಿಯಲ್ಲಿರುವ ಸಾರ್ವಜನಿಕ ಗೌರವಕ್ಕೆ ತಕ್ಕುದಲ್ಲದ ಯಾವುದೇ ಕಾರ್ಯ ಅಥವಾ ಲೋಪ ಅವರಿಂದ ಆಗಬಾರದು. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಅಂತರ ಕಾಯ್ದುಕೊಳ್ಳಬೇಕು ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ, ರಾಜ್ಯಸಭಾ ಸಂಸದ ಸಂಜಯ್ ರಾವುತ್ ಅವರು, "ಸಂವಿಧಾನದ ಪಾಲಕರು ರಾಜಕಾರಣಿಗಳನ್ನು ಭೇಟಿ ಮಾಡಿದರೆ, ಅದು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಉಂಟುಮಾಡಬಹುದು" ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com