ಸಾವಿನಲ್ಲೂ ಸಾರ್ಥಕತೆ ಮೆರೆದ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು ದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾನ ಮಾಡಿದೆ.
ಸೀತಾರಾಂ ಯೆಚೂರಿ
ಸೀತಾರಾಂ ಯೆಚೂರಿ
Updated on

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಮ್ ಯೆಚೂರಿ, ಅವರ ಇಚ್ಚೆಯಂತೆ ಅವರ ಕುಟುಂಬವು ದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾನ ಮಾಡಿದೆ.

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ಪಕ್ಷ ಮತ್ತು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸೀತಾರಾಂ ಯೆಚೂರಿ
ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

2004 ರಲ್ಲಿ ಯುಪಿಎ ಸರ್ಕಾರವನ್ನು ರಚಿಸುವಲ್ಲಿ ಸೀತಾರಾಂ ಯೆಚೂರಿ ಮಹತ್ವದ ಪಾತ್ರವನ್ನು ವಹಿಸಿದರು. ಇತ್ತೀಚೆಗೆ 45 ಲ್ಯಾಟರಲ್ ಎಂಟ್ರಿ ಅಧಿಕಾರಿಗಳ ನೇಮಕ ಜಾಹೀರಾತು ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯೆಚೂರಿ ತೀವ್ರ ಟೀಕೆ ಮಾಡಿದ್ದರು. ನಂತರ ಕೇಂದ್ರ ಸರ್ಕಾರ ಆ ಹುದ್ದೆಗಳ ಜಾಹೀರಾತನ್ನು ಹಿಂಪಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com