ಅಸ್ಸಾಂನಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ ಪ್ರತಿಭಟನೆ: ಪೊಲೀಸರ ಗುಂಡಿನ ದಾಳಿಯಲ್ಲಿ ಇಬ್ಬರು ಮುಸ್ಲಿಮರು ಸಾವು!

ಅಸ್ಸಾಂನ ಗುವಾಹಟಿಯ ಹೊರವಲಯದಲ್ಲಿರುವ ಸೋನ್‌ಪುರದ ಕೊಸುಟೋಲಿಯಲ್ಲಿ ಜಿಲ್ಲಾಡಳಿತದ ಬುಲ್ಡೋಜರ್ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಮನಬಂದಂತೆ ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರTNIE
Updated on

ಗುವಾಹಟಿ: ಅಸ್ಸಾಂನ ಗುವಾಹಟಿಯ ಹೊರವಲಯದಲ್ಲಿರುವ ಸೋನ್‌ಪುರದ ಕೊಸುಟೋಲಿಯಲ್ಲಿ ಜಿಲ್ಲಾಡಳಿತದ ಬುಲ್ಡೋಜರ್ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಮನಬಂದಂತೆ ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಸುಮಾರು ಒಂದು ಡಜನ್ ಜನರು ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸರ್ಕಾರ ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಿದೆ.

ಮಾಹಿತಿ ಪ್ರಕಾರ, ಕೆಲವು ದಿನಗಳಿಂದ ಇಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ಗುರುವಾರ ಆಡಳಿತ ಮಂಡಳಿಯವರು ಮನೆ ಕೆಡವಲು ಬುಲ್ಡೋಜರ್‌ಗಳೊಂದಿಗೆ ಆಗಮಿಸಿದಾಗ, ಸ್ಥಳೀಯ ಜನರು ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆ ನಡೆಸಿದರು. ತಮ್ಮ ಮನೆಯನ್ನು ಉಳಿಸಿಕೊಳ್ಳಲು ಜನರು ಬುಲ್ಡೋಜರ್ ಮುಂದೆ ನಿಂತರು. ಈ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿಯ ನಂತರ ಜನರು ಭಯಭೀತರಾಗಿ ಓಡಿಹೋದರು. ಮೃತಪಟ್ಟವರನ್ನು ಹೈದರ್ ಅಲಿ ಮತ್ತು ಜುವಾಹಿದ್ ಅಲಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಅಸ್ಸಾಂನಲ್ಲಿ ಮನೆಗಳನ್ನು ನೆಲಸಮಗೊಳಿಸಿರುವುದು ಇದೇ ಮೊದಲಲ್ಲ. ಅಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ನಿರಂತರವಾಗಿ ಮುಸ್ಲಿಮರ ಮನೆ, ಅಂಗಡಿ, ಮಸೀದಿ, ಮದರಸಾಗಳನ್ನು ಗುರಿಯಾಗಿಸಿಕೊಂಡು ಧ್ವಂಸ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಗುವಾಹಟಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಕೂಡ ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಒಂದು ಪ್ರಕರಣದಲ್ಲಿ, ಗುವಾಹಟಿ ಹೈಕೋರ್ಟ್ ಆರೋಪಿಯ ಮನೆಯನ್ನು ಕೆಡವಿದ ನಂತರ ಸರ್ಕಾರಕ್ಕೆ ಪರಿಹಾರವನ್ನು ನೀಡುವಂತೆ ಆದೇಶಿಸಿದೆ. ಹೀಗಿದ್ದರೂ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿ ಬಿಜೆಪಿ ಆಡಳಿತವಿರುವ ಅಸ್ಸಾಂ, ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಮುಸ್ಲಿಮರ ಮನೆಗಳನ್ನು ಸರಕಾರಗಳು ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗುತ್ತಿದ್ದಂತೆಯೇ ಅವರ ಮನೆಗಳನ್ನು ಕೆಡವುತ್ತಿವೆ.

ಸಂಗ್ರಹ ಚಿತ್ರ
2,200 ಕೋಟಿ ಆನ್‌ಲೈನ್ ಟ್ರೇಡಿಂಗ್ ಹಗರಣ: ಅಸ್ಸಾಂ ನಟಿ ಮತ್ತು ಅವರ ಪತಿ ಬಂಧನ

ಬುಲ್ಡೋಜರ್ ಕಾರ್ಯಾಚರಣೆ ವೇಳೆ ಪೊಲೀಸರು ಗುಂಡು ಹಾರಿಸಿ ಇಬ್ಬರು ಸಾವನ್ನಪ್ಪಿರುವುದು ಇದೇ ಮೊದಲು. ಈ ಘಟನೆಯ ನಂತರ ಅಸ್ಸಾಂನ ಮುಸ್ಲಿಂ ವಿದ್ಯಾರ್ಥಿ ಸಂಘದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಸ್ಸಾಂನ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ ಮುಖ್ಯಸ್ಥ ಆಶಿಕ್ ರಬ್ಬಾನಿ ಈ ಘಟನೆಯನ್ನು ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com