ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದ ನಂತರ ಬಿಜೆಪಿಯ ಪ್ಲಾನ್ ವಿಫಲವಾಗಿದೆ ಎಂದು ಸುನೀತಾ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿ ಉಳಿಯಲು ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಲು ಬಿಜೆಪಿಯವರು ಬಯಸುತ್ತಾರೆ. ಇದೊಂದೇ ಅವರ ಗುರಿ ಎಂದರು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಮಾರು 18 ತಿಂಗಳ ಬಳಿಕ ಕಳೆದ ತಿಂಗಳು ಜೈಲಿನಿಂದ ಬಿಡುಗಡೆಯಾದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡಲು ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ ರೀತಿ, ಅವರನ್ನು ಜೈಲಿನಲ್ಲಿಡುವ ಉದ್ದೇಶದಿಂದ ಬಂಧನ ಮಾಡಿದಂತೆ ಕಾಣುತ್ತಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಕೇಜ್ರಿವಾಲ್ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯ ಕಾರಣದಿಂದ ಸಿಬಿಐ ಬಂಧಿಸಿ ಜೈಲಿನಲ್ಲಿಟ್ಟು ಎಂದು ಆರೋಪಿಸಿದರು.
ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧನಕ್ಕೊಳಪಡಿಸಿತ್ತು. 10 ದಿನಗಳ ವಿಚಾರಣೆಯ ನಂತರ ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು. ಜೈಲಿನಲ್ಲಿ ಕಳೆದ ಒಟ್ಟು ಸಮಯ 177 ದಿನಗಳು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.
Advertisement