ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದ ಕೇಂದ್ರ

ಇಂದು ನಾವು ಪೋರ್ಟ್ ಬ್ಲೇರ್ ಅನ್ನು "ಶ್ರೀ ವಿಜಯ ಪುರಂ" ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on

ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಸಾಹತುಶಾಹಿ ಮುದ್ರೆಯಿಂದ ದೇಶವನ್ನು ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಪ್ರೇರಿತರಾಗಿ ಇಂದು ನಾವು ಪೋರ್ಟ್ ಬ್ಲೇರ್ ಅನ್ನು "ಶ್ರೀ ವಿಜಯ ಪುರಂ" ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

"ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದರೂ, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸೂಚಿಸುತ್ತದೆ" ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ
ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸಾಟಿಯಿಲ್ಲದ ಸ್ಥಾನವನ್ನು ಹೊಂದಿವೆ. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಕಾರ್ಯನಿರ್ವಹಿಸಿದ್ದ ಈ ದ್ವೀಪ ಪ್ರದೇಶ ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿಯ ಮಹತ್ವಾಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಿದೆ" ಎಂದು ಕೇಂದ್ರ ಗೃಹ ಸಚಿವರು ಪೋಸ್ಟ್ ಮಾಡಿದ್ದಾರೆ.

ಇದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ನಮ್ಮ ತ್ರಿವರ್ಣ ಧ್ವಜದ ಮೊದಲ ಅನಾವರಣವನ್ನು ಆಯೋಜಿಸಿದ ಸ್ಥಳವಾಗಿದೆ. ವೀರ್ ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿದ ಸೆಲ್ಯುಲಾರ್ ಜೈಲು ಇರುವ ಸ್ಥಳವಾಗಿದೆ” ಎಂದು ಗೃಹ ಸಚಿವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com