ಶಾಲೆಯಲ್ಲಿದ್ದಾಗ ಹೃದಯಸ್ತಂಭನ: 9 ವರ್ಷದ ವಿದ್ಯಾರ್ಥಿ ಸಾವು!

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
file pic
ಸಾಂದರ್ಭಿಕ ಚಿತ್ರonline desk
Updated on

ಲಖನೌ: ಶಾಲೆಯಲ್ಲಿದ್ದಾಗ ಹೃದಯಸ್ತಂಭನದಿಂದಾಗಿ 9 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಲಖನೌ ನಲ್ಲಿರುವ ಮೋಂಟ್ ಫೋರ್ಟ್ ಶಾಲೆಯಲ್ಲಿ ವರದಿಯಾಗಿದೆ.

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮಾನ್ವಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದು, ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಆಕೆಯ ಪೋಷಕರು ಆಕೆಯನ್ನು ಚಂದನ್ ಆಸ್ಪತ್ರೆಗೆ ಕರೆದೊಯ್ದರು ಆ ವೇಳೆಗೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾಗಿ ಪ್ರಾಂಶುಪಾಲರು ತಿಳಿಸಿದ್ದಾರೆ.

file pic
ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ: ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ!

ಈ ವಿಷಯ ಪೊಲೀಸರ ಗಮನಕ್ಕೂ ಬಂದಿದ್ದು, ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಬಾಲಕಿಯ ಮನೆಯವರು ಹೇಳಿದ್ದಾರೆ. ಬಾಲಕಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com