ಛತ್ತೀಸ್‌ಗಢ: ಸುಕ್ಮಾದಲ್ಲಿ ಗುಂಡಿನ ಚಕಮಕಿ, ನಕ್ಸಲೀಯನ ಹತ್ಯೆ

ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್‌ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್‌ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.
ಭದ್ರತಾ ಪಡೆ ಸಾಂದರ್ಭಿಕ ಚಿತ್ರ
ಭದ್ರತಾ ಪಡೆ ಸಾಂದರ್ಭಿಕ ಚಿತ್ರ
Updated on

ರಾಯಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲೀಯ ಮುಖಂಡರೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್‌ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್‌ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ಗುಂಡಿನ ಚಕಮಕಿ ಸ್ಥಗಿತದ ನಂತರ ಸ್ಥಳದಿಂದ ನಕ್ಸಲೀಯನ ಮೃತದೇಹ, ಶಸ್ತ್ರಾಸ್ತ್ರ ಮತ್ತು ಮಾವೋವಾದಿ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲೀಯನ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.

ಭದ್ರತಾ ಪಡೆ ಸಾಂದರ್ಭಿಕ ಚಿತ್ರ
ಛತ್ತೀಸ್ ಗಢ: ಬಿಜಾಪುರ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆ, ಮೂವರು ನಕ್ಸಲೀಯರ ಬಂಧನ

ಈ ಘಟನೆಯೊಂದಿಗೆ ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ವಿಭಾಗದಲ್ಲಿ ಈ ವರ್ಷ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 154 ನಕ್ಸಲೀಯರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com