ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ವಂಶ ರಾಜಕಾರಣ ಕೊನೆಯಾಗುತ್ತಿದೆ: ಪ್ರಧಾನಿ ಮೋದಿ

ಇದೇ ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣಾ ಪ್ರಚಾರ ಸಭೆ ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಉಸಿರು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ದೇಶದ ಈ ಸುಂದರ ನಾಡನ್ನು ಹಾಳುಮಾಡಿದ ವಂಶ ರಾಜಕಾರಣಿಗಳ ವಿರುದ್ಧ ತಮ್ಮ ಸರ್ಕಾರ ಹೊಸ ನಾಯಕತ್ವವನ್ನು ಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ದೋಡಾ ಜಿಲ್ಲೆಯಲ್ಲಿ ಇಂದು ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಮತ್ತು ನೀವು ಒಟ್ಟಾಗಿ ಜಮ್ಮು -ಕಾಶ್ಮೀರವನ್ನು ದೇಶದ ಸುರಕ್ಷಿತ ಮತ್ತು ಸಮೃದ್ಧ ಭಾಗವನ್ನಾಗಿ ಮಾಡೋಣ ಎಂದು ಹೇಳಿದರು.

ಇದೇ ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣಾ ಪ್ರಚಾರ ಸಭೆ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ಸ್ವಾತಂತ್ರ್ಯದ ನಂತರ, ಜಮ್ಮು ಮತ್ತು ಕಾಶ್ಮೀರವು ವಿದೇಶಿ ಶಕ್ತಿಗಳ ಗುರಿಯಾಯಿತು ನಂತರ ವಂಶ ರಾಜಕೀಯವು ಈ ಸುಂದರ ಪ್ರದೇಶವನ್ನು ಟೊಳ್ಳಾಗಿಸಿ ಹಾಳುಮಾಡಿತು. ಇಲ್ಲಿನ ವಂಶಾಡಳಿತ ರಾಜಕಾರಣಿಗಳು ತಮ್ಮ ಮಕ್ಕಳನ್ನು ಮುಂದಿಟ್ಟುಕೊಂಡು ಹೊಸ ನಾಯಕರನ್ನು ಬೆಳೆಯಲು ಬಿಡಲಿಲ್ಲ ಎಂದು ಆರೋಪಿಸಿದರು.

2014ರಲ್ಲಿ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಇಲ್ಲಿ ಯುವ ನಾಯಕತ್ವವನ್ನು ರೂಪಿಸುವತ್ತ ಸರ್ಕಾರ ಗಮನಹರಿಸಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com