ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಉಗ್ರರೊಂದಿಗೆ ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ನಡೆಸಿದರು.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಉಗ್ರರೊಂದಿಗೆ ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ನಡೆಸಿದರು.
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಕಳೆದ ರಾತ್ರಿಯಿಂದ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಇಂದು ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.

ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ನಿನ್ನೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು, ಅದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ ಮತ್ತಿಬ್ಬರು ಗಾಯಗೊಂಡಿದ್ದರು. ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಇಂದು ಮೂವರು ಉಗ್ರರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯೋಧರು ನಿನ್ನೆ ರಾತ್ರಿಯಿಂದಲೇ ಪ್ರದೇಶವನ್ನು ಸುತ್ತುವರಿದು ಇಂದು ನಸುಕಿನ ಜಾವ ಏರ್ಪಟ್ಟ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com