
ರಾಂಚಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿರುವುದುಕ್ಕೆ ಸಂತಸ ವ್ಯಕ್ತಪಡಿಸಿರುವ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಇದು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಹೇಮಂತ್ ಸೊರೇನ್, 'ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರ್ಖಂಡ್ ಪ್ರಜೆಗಳಿಂದ ಅಭಿನಂದನೆಗಳು. ಇದು ಸತ್ಯದ ಗೆಲುವು ಮತ್ತು ಸುಳ್ಳಿನ ಸೋಲು. ಇಂದು, ಸುಳ್ಳು ಮತ್ತು ಪಿತೂರಿಯನ್ನು ಸೋಲಿಸುವ ಮೂಲಕ ಸತ್ಯ ಗೆದ್ದಿದೆ ಎಂದು ಹೇಮಂತ್ ಸೊರೇನ್ ಬಣ್ಣಿಸಿದ್ದಾರೆ.
ಇದಕ್ಕೂ ಮುನ್ನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
Advertisement