ಇಂದೋರ್: ಇಂದೋರ್‌ನಲ್ಲಿ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ತಡರಾತ್ರಿ ಅಪಘಾತ ಸಂಭವಿಸಿದ ನಂತರ ಕಾರು ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಕಾರು ಮಾಲೀಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
ಪ್ರಸಿದ್ಧ ಖಜರಾನ ಗಣೇಶ ದೇವಸ್ಥಾನದ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮಿ ತೋಮರ್ ಮತ್ತು ದೀಕ್ಷಾ ಜಾಡೋನ್ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದಾಗ ಖಜ್ರಾನಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.
"ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಿಎಂಡಬ್ಲ್ಯು ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಮಹಿಳೆಯರು ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದರು" ಎಂದು ಖಜ್ರಾನಾ ಪೊಲೀಸ್ ಠಾಣೆ ತಿಳಿಸಿದೆ.
ಕಳೆದ ವರ್ಷ ಅವರ ತಂದೆ ನಿಧನರಾದ ನಂತರ ಲಕ್ಷ್ಮಿ ತೋಮರ್ ಮಾತ್ರ ಕುಟುಂಬದ ಆರ್ಥಿಕತೆ ಆಧಾರವಾಗಿದ್ದರು. ಮೂಲತಃ ಶಿವಪುರಿಯವರಾದ ತೋಮರ್ ಇಂದೋರ್‌ನಲ್ಲಿ ಕೆಲಸ ಮಾಡುವ ಮೂಲಕ ತಮ್ಮ ಕುಟುಂಬವನ್ನು ಪೋಷಿಸುತ್ತಿದ್ದರು.
ಗ್ವಾಲಿಯರ್ ಮೂಲದ ಮತ್ತೊಬ್ಬ ಮೃತ ವ್ಯಕ್ತಿ ದೀಕ್ಷಾ ಜಾಡೋನ್ ಇಂದೋರ್ ಮೂಲದ ಸಾರ್ವಜನಿಕ ವಲಯದ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement