ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ

ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರು ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇರೆಗೆ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪ್ರಕಟಿಸಿದ್ದಾರೆ.

ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಪಕ್ಷದ ಕಚೇರಿಗೆ ತೆರಳಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮತ್ತೆ ಜನಾಶೀರ್ವಾದ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರು.

ನನಗೆ ಕಾನೂನು ನ್ಯಾಯಾಲಯದಿಂದ ನ್ಯಾಯ ಸಿಕ್ಕಿತು. ಈಗ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ. ಕೇಜ್ರೀವಾಲ್ ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಬಿಜೆಪಿಯವರು, ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿ ದೆಹಲಿಯಲ್ಲಿ ಸರ್ಕಾರ ರಚಿಸಲು ಬಯಸಿದ್ದರು. ಆದರೆ ಅವರು ನಮ್ಮ ಪಕ್ಷವನ್ನು ಒಡೆಯಲು ಸಾಧ್ಯವಾಗಲಿಲ್ಲ. ಪಕ್ಷದ ಕಾರ್ಯಕರ್ತರಿಂದ ದೂರವಾಗಲೂ ಸಾಧ್ಯವಾಗಲಿಲ್ಲ ಎಂದು ವಾಗ್ದಾಳಿ ನಡೆಸಿದರು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅವರು ರಾಜೀನಾಮೆ ನೀಡಿದ ನಂತರ ಪಕ್ಷದ ಸದಸ್ಯರನ್ನು ಮುಖ್ಯಮಂತ್ರಿ ಎಂದು ಹೆಸರಿಸಲಾಗುವುದು ಎಂದು ಹೇಳಿದರು. ಜನರ ಮಧ್ಯೆ ಹೋಗಿ ಬೆಂಬಲ ಕೇಳುತ್ತೇನೆ ಎಂದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಆರು ತಿಂಗಳ ನಂತರ ತಿಹಾರ್‌ ಜೈಲಿನಿಂದ ಹೊರಬಂದ ದೆಹಲಿ ಸಿಎಂ ಕೇಜ್ರಿವಾಲ್

ನಾನು ರಾಜೀನಾಮೆ ನೀಡಿದ ನಂತರ ಪಕ್ಷದ ಸದಸ್ಯರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ನಾನು ಜನರ ಬಳಿಗೆ ತೆರಳಿ ಅವರ ಬೆಂಬಲ ಕೋರುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು. ಫೆಬ್ರವರಿಯಲ್ಲಿ ನಿಗದಿಯಾಗಿರುವ ದೆಹಲಿಯ ಚುನಾವಣೆಯನ್ನು ಮಹಾರಾಷ್ಟ್ರದ ಚುನಾವಣೆ ಜೊತೆಗೆ ನವೆಂಬರ್‌ನಲ್ಲಿ ನಡೆಸಬೇಕೆಂದು ಕೇಜ್ರಿವಾಲ್ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com