ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಭಾನುವಾರ ವ್ಯಾನ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಂಡಖೇಡ ತಾಲೂಕಿನ ದಾಸ್ವೆಲ್ ಫಟಾದಲ್ಲಿ ಬೆಳಗ್ಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವ್ಯಾನ್ ಕಾರಿಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ವ್ಯಾನ್ ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದೆ. ಆತನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ಕುರಿತು ನಾರ್ದಾನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
Advertisement