ಆತ ನಂ.1 ಭಯೋತ್ಪಾದಕ: ರಾಹುಲ್ ಗಾಂಧಿ ವಿರುದ್ಧ ಟೀಕೆಯ ಭರದಲ್ಲಿ ಕೇಂದ್ರ ಸಚಿವ ಯಡವಟ್ಟು!

ಬಿಟ್ಟು ಮೋದಿ ಕ್ಯಾಬಿನೆಟ್ ನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Rahul Gandhi
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಯುಎಸ್ ಎಯ ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು. online desk
Updated on: 

ಹೌರಾ: ಅಮೇರಿಕಾದಲ್ಲಿ ಭಾರತದ ಕುರಿತು ಆಕ್ಷೇಪಾರ್ಹ ರೀತಿಯಲ್ಲಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಟಿಕಾ ಪ್ರಹಾರ ನಡೆಸುವ ಭರದಲ್ಲಿ ಕೇಂದ್ರ ಸಚಿವ ರಣ್ವೀತ್ ಸಿಂಘ್ ಬಿಟ್ಟು ಯಡವಟ್ಟು ಮಾಡಿಕೊಂಡಿದ್ದಾರೆ.

ಅಮೇರಿಕಾ ಪ್ರವಾಸದ ವೇಳೆ ರಾಹುಲ್ ಗಾಂಧಿ, ಭಾರತದಲ್ಲಿ ಸಿಖ್ ಸಮುದಾಯದ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರಣ್ವೀತ್ ಸಿಂಗ್ ಬಿಟ್ಟು, ಆ ಬಾಂಬ್ ತಯಾರಕರು ಆತನನ್ನು ಬೆಂಬಲಿಸುತ್ತಿದ್ದಾರೆ ಎಂದಾದರೆ ಆತ ನಂ.1 ಭಯೋತ್ಪಾದಕ ಎಂದು ಹೇಳಿದ್ದಾರೆ.

Rahul Gandhi
ಮೀಸಲಾತಿ ರದ್ದು ಕುರಿತು ರಾಹುಲ್ ಗಾಂಧಿ ಹೇಳಿಕೆ ಸಂವಿಧಾನ ವಿರೋಧಿ ಮನಸ್ಥಿತಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಬಿಟ್ಟು ಮೋದಿ ಕ್ಯಾಬಿನೆಟ್ ನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೌರಾಗೆ ವಂದೇ ಭಾರತ್ ರೈಲು ಸಂಪರ್ಕಕ್ಕೆ ಹಸಿರು ನಿಶಾನೆಯ ಕಾರ್ಯಕ್ರಮದಲ್ಲಿ ಬಿಟ್ಟು ಈ ಹೇಳಿಕೆ ನೀಡಿದ್ದಾರೆ.

ಬಿಟ್ಟು ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಕೇಂದ್ರ ಸಚಿವರು ಸಂವೇದನಾರಹಿತ ವ್ಯಕ್ತಿಯಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com