ಮಲಪ್ಪುರಂ: ಇತ್ತೀಚೆಗಷ್ಟೇ ಮಲಪ್ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ 24 ವರ್ಷದ ವ್ಯಕ್ತಿಗೆ ನಿಫಾ ವೈರಸ್ ಸೋಂಕು ತಗುಲಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪ್ರಾದೇಶಿಕ ವೈದ್ಯಾಧಿಕಾರಿ ನಡೆಸಿದ ಸಾವಿನ ತನಿಖೆ ಬಳಿಕ ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿ ಮಾದರಿಗಳನ್ನು ತಕ್ಷಣವೇ ಪರೀಕ್ಷೆಗೆ ಕಳುಹಿಸಿದಾಗ ನಿಪಾ ದೃಢಪಟ್ಟಿತು ಎಂದು ಸಚಿವೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ರಾಜ್ಯಕ್ಕೆ ಆಗಮಿಸಿದ ಮಲಪ್ಪುರಂ ಮೂಲದವರು ಕಳೆದ ಸೆಪ್ಟೆಂಬರ್ 9 ರಂದು ನಿಧನರಾಗಿದ್ದರು. ನಂತರ ಅವರ ಲಭ್ಯವಿರುವ ಮಾದರಿಗಳನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು.
ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನ ಫಲಿತಾಂಶದಲ್ಲಿ ಪಾಸಿಟಿವ್ ಬಂದಿತ್ತು ಎಂದು ಮಲಪ್ಪುರಂ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ, ನಂತರ ಆರೋಗ್ಯ ಸಚಿವೆ ನಿನ್ನೆ ರಾತ್ರಿಯೇ ಉನ್ನತ ಮಟ್ಟದ ಸಭೆಯನ್ನು ನಡೆಸಿದರು ಮತ್ತು ಪ್ರೋಟೋಕಾಲ್ ಪ್ರಕಾರ ಅಗತ್ಯ ಕ್ರಮಗಳನ್ನು ಪ್ರಾರಂಭಿಸಿದರು.
ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (NIV) ಸಹ ಫಲಿತಾಂಶಗಳು ಸೋಂಕನ್ನು ದೃಢಪಡಿಸಿದೆ. 16 ಸಮಿತಿಗಳನ್ನು ರಚಿಸಲಾಗಿದ್ದು, 151 ಜನರ ಸಂಪರ್ಕ ಪಟ್ಟಿಯನ್ನು ಗುರುತಿಸಲಾಗಿದೆ. ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ವಿವಿಧ ಸ್ಥಳಗಳಿಗೆ ಪ್ರಯಾಣಿಸಿದ್ದು, ನಿಕಟ ಸಂಪರ್ಕಿತರನ್ನು ಪ್ರತ್ಯೇಕಿಸಲಾಗಿದೆ.
ಐಸೋಲೇಷನ್‌ನಲ್ಲಿರುವ ಐವರಲ್ಲಿ ಸಣ್ಣ ಜ್ವರ ಮತ್ತು ರೋಗಲಕ್ಷಣಗಳು ಕಂಡುಬಂದಿವೆ. ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು, ನಿಪಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಲಪ್ಪುರಂನ ಬಾಲಕ ಜುಲೈ 21ರಂದು ಮೃತಪಟ್ಟಿದ್ದ.
ರಾಜ್ಯದಲ್ಲಿ ಈ ವರ್ಷ ನಿಫಾ ಸೋಂಕು ದೃಢಪಟ್ಟ ಮೊದಲ ಪ್ರಕರಣ ಇದಾಗಿದೆ. 2018, 2021 ಮತ್ತು 2023 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಮತ್ತು 2019 ರಲ್ಲಿ ಎರ್ನಾಕುಲಂ ಜಿಲ್ಲೆಯಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿತ್ತು. ಕೋಝಿಕ್ಕೋಡ್, ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಬಾವಲಿಗಳಲ್ಲಿ ನಿಫಾ ವೈರಸ್ ಪ್ರತಿಕಾಯಗಳ ಉಪಸ್ಥಿತಿ ಪತ್ತೆಯಾಗಿತ್ತು.
Advertisement