ಕೋಲ್ಕತ್ತಾ: ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನು ಸೆಪ್ಟೆಂಬರ್ 17ರವರೆಗೆ ಕೇಂದ್ರೀಯ ತನಿಖಾ ದಳ (CBI) ಕಸ್ಟಡಿಗೆ ಒಪ್ಪಿಸಿದೆ. ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.
ಸಂದೀಪ್ ಘೋಷ್ ಮತ್ತು ಅಭಿಜಿತ್ ಮೊಂಡಲ್ ಅವರನ್ನು ನಿನ್ನೆ ಶನಿವಾರ ರಾತ್ರಿ ಸಿಬಿಐ ಬಂಧಿಸಿದ್ದು, ಸಾಕ್ಷ್ಯಾಧಾರಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದರು. ಮೊಂಡಲ್ ಇತರ ಆರೋಪಿಗಳ ಜೊತೆಗೆ ಎಫ್‌ಐಆರ್ ನೋಂದಣಿಯನ್ನು ವಿಳಂಬ ಮಾಡಿದ ಆರೋಪವನ್ನೂ ಹೊರಿಸಿದ್ದಾರೆ.
ಸೆಪ್ಟೆಂಬರ್ 17 ರವರೆಗೆ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದೇವೆ. ಈಗ ಇಬ್ಬರನ್ನೂ ಒಟ್ಟಿಗೆ ವಿಚಾರಣೆ ನಡೆಸಲಾಗುವುದು. ಆರ್‌ಜಿ ಕರ್ ಪ್ರಕರಣದಲ್ಲಿ ಇವರಿಬ್ಬರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಬಿಐ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಸಂದೀಪ್ ಘೋಷ್ ಅವರನ್ನು ಈಗಾಗಲೇ ಸಿಬಿಐ ಬಂಧಿಸಿತ್ತು. ಪ್ರಸ್ತುತ ಆ ಪ್ರಕರಣಕ್ಕಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಆಗಸ್ಟ್ 9ರಂದು ಆರ್ ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನ ನಾಲ್ಕನೇ ಮಹಡಿಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಅರೆಬೆತ್ತಲೆ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂತು. ವೈದ್ಯಕೀಯ ಪರೀಕ್ಷೆಯಲ್ಲಿ ಸಂತ್ರಸ್ತೆ ಲೈಂಗಿಕ ದೌರ್ಜನ್ಯದಿಂದಾಗಿ ಬಾಹ್ಯ ಮತ್ತು ಆಂತರಿಕ ಗಾಯಗೊಂಡು ಕೊಲೆ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಮೂವರನ್ನು ಬಂಧಿಸಲಾಗಿದೆ.
Advertisement