ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ರದ್ದು; ಜೆಮ್ ಶೆಡ್ ಪುರಕ್ಕೆ ರಸ್ತೆ ಮಾರ್ಗವಾಗಿ ಸಾಗಿದ ಪ್ರಧಾನಿ ಮೋದಿ!

ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
PM Modi
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on

ನವದೆಹಲಿ: ಕಾರ್ಯಕ್ರಮವೊಂದರ ನಿಮಿತ್ತ ಜೆಮ್ ಶೆಡ್ ಪುರಕ್ಕೆ ತೆರಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಟೇಕ್ ಆಗದೇ ಅವರು ರಸ್ತೆ ಮಾರ್ಗವಾಗಿ ತೆರಳಿದ ಘಟನೆ ವರದಿಯಾಗಿದೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್‌ಶೆಡ್‌ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ 'ಪರಿವರ್ತನ್ ಮಹಾ ರ್‍ಯಾಲಿ'ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಈ ವರ್ಷಾಂತ್ಯದಲ್ಲಿ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶದಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ.

PM Modi
ರಾಂಚಿ: ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಇತ್ತೀಚೆಗೆ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೂರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

2019ರ ವಿಧಾನಸಭಾ ಚುನಾವಣೆಯಲ್ಲಿ, ಬುಡಕಟ್ಟು ಪ್ರಾಬಲ್ಯವಿರುವ ಒಂಬತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಈ ಪ್ರದೇಶದಿಂದ ಆರಿಸಿ ಬಂದಿದ್ದರು. ಅಲ್ಲಿ ಪ್ರಭಾವವನ್ನು ಹೊಂದಿರುವ ದೃಷ್ಟಿಯಿಂದ ಈ ಭೇಟಿಯನ್ನು ಪ್ರಮುಖವೆಂದು ಪರಿಗಣಿಸಲಾಗಿದೆ. ಚಂಪೈ ಸೋರೆನ್ ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com