ಸೆ.21-23 ವರೆಗೆ ಮೋದಿ ಅಮೇರಿಕಾ ಭೇಟಿ: ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಮಾತು

ಇದೇ ಪ್ರವಾಸದಲ್ಲಿ ಮೋದಿ ನ್ಯೂಯಾರ್ಕ್ ನಲ್ಲಿ ನಡೆಯಲಿರುವ, ವಿಶ್ವದ ಹಲವು ನಾಯಕರು ಇರಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
PM Modi visit US from Sept 21 to 23; take part in Quad Summit, address 'Summit of Future' at UNGA
ಪ್ರಧಾನಿ ನರೇಂದ್ರ ಮೋದಿonline desk
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆ.21-23 ವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದು, ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದೇ ಪ್ರವಾಸದಲ್ಲಿ ಮೋದಿ ನ್ಯೂಯಾರ್ಕ್ ನಲ್ಲಿ ನಡೆಯಲಿರುವ, ವಿಶ್ವದ ಹಲವು ನಾಯಕರು ಇರಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆಯ ಪ್ರಕಾರ, ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಆಯೋಜಿಸಿರುವ ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆಯಲಿರುವ ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಕ್ವಾಡ್ ಶೃಂಗಸಭೆಯಲ್ಲಿ, ನಾಯಕರು ಕಳೆದ ಒಂದು ವರ್ಷದಲ್ಲಿ ಕ್ವಾಡ್ ಸಾಧಿಸಿದ ಪ್ರಗತಿಯನ್ನು ಪರಿಶೀಲಿಸುತ್ತಾರೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳಿಗೆ ತಮ್ಮ ಅಭಿವೃದ್ಧಿ ಗುರಿಗಳು ಮತ್ತು ಆಕಾಂಕ್ಷೆಗಳನ್ನು ತಲುಪಲು ಸಹಾಯ ಮಾಡಲು ಮುಂದಿನ ವರ್ಷದ ಕಾರ್ಯಸೂಚಿಯ ಬಗ್ಗೆ ನಿರ್ಧರಿಸುತ್ತಾರೆ. ಮುಂದಿನ ಕ್ವಾಡ್ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ.

PM Modi visit US from Sept 21 to 23; take part in Quad Summit, address 'Summit of Future' at UNGA
74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ, ದೂರದೃಷ್ಟಿಯುಳ್ಳ ನಾಯಕನೆಂದು ಕೊಂಡಾಡಿದ BJP ನಾಯಕರು

ಶೃಂಗಸಭೆಯ ನಡುವೆ, ಪ್ರಧಾನ ಮಂತ್ರಿ ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಎಐ, ಕ್ವಾಂಟಮ್ ಕಂಪ್ಯೂಟಿಂಗ್, ಸೆಮಿಕಂಡಕ್ಟರ್‌ಗಳು ಮತ್ತು ಜೈವಿಕ ತಂತ್ರಜ್ಞಾನದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವೆ ಹೆಚ್ಚಿನ ಸಹಯೋಗವನ್ನು ಬೆಳೆಸಲು ಮೋದಿ, ಯುಎಸ್ ಮೂಲದ ಪ್ರಮುಖ ಕಂಪನಿಗಳ ಸಿಇಒಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಎಂಇಎ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com