ಶ್ರೀನಗರ: ಜಮ್ಮು-ಕಾಶ್ಮೀರದ ವಿಧಾನಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು ಶೇ.59 ರಷ್ಟು ಮತದಾನ ನಡೆದಿದೆ. 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಸೆ.18 ರಂದು ಚುನಾವಣೆ ನಡೆದಿದೆ.
ಒಟ್ಟಾರೆ ಶೇ.59 ರಷ್ಟು ಚುನಾವಣೆ ನಡೆದಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪಿಕೆ ಪೋಲ್ ಹೇಳಿದ್ದಾರೆ. 2014 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಇದು ಮೊದಲ ವಿಧಾನಸಭಾ ಚುನಾವಣೆ ನಡೆದಿದೆ ಮತ್ತು 2019 ರಲ್ಲಿ ಹಿಂದಿನ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ ಇದು ಮೊದಲ ಚುನಾವಣೆಯಾಗಿದೆ.
370 ನೇ ವಿಧಿಯನ್ನು ರದ್ದುಗೊಳಿಸಿದಾಗ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.
ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನಮಾನ ಒಂದು ಪ್ರಮುಖ ವಿಷಯವಾಗಿದೆ ಮತ್ತು ಅದರ ಮರುಸ್ಥಾಪನೆಯನ್ನು ಮಾಡುವುದಾಗಿ ಬಿಜೆಪಿ ಭರವಸೆ ನೀಡಿದೆ.
Advertisement